More

    ಇ-ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಕ್ರಮ: ಡಿಸಿ ಡಾ. ಆರ್.ಸೆಲ್ವಮಣಿ

    ಶಿವಮೊಗ್ಗ: ಇ-ತ್ಯಾಜ್ಯವನ್ನು ಮರುಬಳಕೆ ಮತ್ತು ಮರು ಉಪಯೋಗ ಮಾಡಬಹುದು. ಈಗಾಗಲೇ ಬೆಂಗಳೂರಿನಲ್ಲಿ ಇ-ತ್ಯಾಜ್ಯ ವಿಲೇವಾರಿ ಸಂಸ್ಥೆಗಳು ಆರಂಭವಾಗುತ್ತಿದ್ದು ಶಿವಮೊಗ್ಗದಲ್ಲೂ ಇ-ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.
    ಅಂತಾರಾಷ್ಟ್ರೀಯ ಇ-ತ್ಯಾಜ್ಯ ದಿನದ ನಿಮಿತ್ತ ಎಟಿಎನ್‌ಸಿಸಿ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಇ-ತ್ಯಾಜ್ಯ ಅರಿವು ಮತ್ತು ವಿಲೇವಾರಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿದಿನ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ಸಾಮಾನ್ಯ ಆಗಿದ್ದು ತ್ಯಾಜ್ಯ ಉತ್ಪತ್ತಿಯು ಅಧಿಕವಾಗುತ್ತಿದೆ. ಹಾಗಾಗಿ ಇ-ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇ ಮಾಡುವುದು ಪ್ರಸ್ತುತ ಅವಶ್ಯಕವಾಗಿದೆ ಎಂದರು.
    ಎರಡು ದಶಕಗಳಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆ ಹೆಚ್ಚಿದ್ದು ಅದೇ ರೀತಿಯಲ್ಲಿ ತ್ಯಾಜ್ಯ ಕೂಡ ಅಧಿಕವಾಗಿದೆ. ದಿನನಿತ್ಯ ಉತ್ಪತ್ತಿ ಆಗುವ ಇ-ತ್ಯಾಜ್ಯವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಆಗುತ್ತಿಲ್ಲ. ಇದರಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
    ಸರ್ಜಿ ಫೌಂಡೇಷನ್ ವ್ಯವಸ್ಥಾಪಕ ಟ್ರಸ್ಟಿ ಡಾ. ಧನಂಜಯ ಸರ್ಜಿ ಮಾತನಾಡಿ, ಇ ತ್ಯಾಜ್ಯದ ಅರಿವು ಮತ್ತು ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿನ ಹಂತದಿಂದ ಜಾಗೃತಿ ಮೂಡಿಸಬೇಕು. ಇದರಿಂದ ಮುಂದಿನ ವರ್ಷಗಳಲ್ಲಿ ಉತ್ಪತ್ತಿ ಆಗಬಹುದಾದ ತ್ಯಾಜ್ಯ ತಡೆಗಟ್ಟಬಹುದು ಎಂದು ಹೇಳಿದರು.
    ಮೇಯರ್ ಸುನೀತಾ ಅಣ್ಣಪ್ಪ, ಎನ್‌ಇಎಸ್ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಮಾತನಾಡಿದರು. ಎನ್‌ಇಎಸ್ ನಿರ್ದೇಶಕ ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್ಕುಮಾರ್, ಗಣೇಶ್ ಅಂಗಡಿ, ಪ್ರದೀಪ್ ಎಲಿ, ಐ ಸೆವೆನ್ ವೇಣುಗೋಪಾಲ್, ಜಿ.ವಿ.ರವೀಂದ್ರ, ಪ್ರಾದೇಶಿಕ ಪರಿಸರ ಅಧಿಕಾರಿ ಶಿಲ್ಪಾ, ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪರಿಸರ ಅಧ್ಯಯನ ಕೇಂದ್ರ ನಿರ್ದೇಶಕ ಜನಾರ್ಧನ್, ಡೂ ಮೈಂಡ್ಸ್ ಡಿಸೈನ್ ಲ್ಯಾಬ್ ವೆಂಕಟೇಶ್, ನವೀನ್, ರಮೇಶ್ ಹೆಗ್ಡೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts