More

    ಗೂಳಿಹಟ್ಟಿ ಶೇಖರ್ ಹೇಳಿಕೆಯಿಂದ ಕ್ರೈಸ್ತ ಸಮುದಾಯಕ್ಕೆ ಅವಮಾನ

    ಶಿವಮೊಗ್ಗ: ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ವ್ಯಾಪಕವಾಗಿ ಮತಾಂತರ ಮಾಡುತ್ತಿವೆ ಎಂದು ಶಾಸಕ ಗೂಳಿಹಟ್ಟಿ ಶೇಖರ್ ಮಾಡಿರುವ ಆರೋಪ ಸುಳ್ಳು. ವಿಧಾನಸಭೆ ಅಧಿವೇಶನದಲ್ಲಿ ಅವರು ಇಡೀ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಮಾನಿಸಿದ್ದಾರೆ ಎಂದು ಕ್ರಿಶ್ಚಿಯನ್ ಪೋರಂ ಫಾರ್ ಹ್ಯೂಮನ್ ರೈಟ್ಸ್‌ನ ಅಧ್ಯಕ್ಷ ಡಿ. ರಾಜಶೇಖರ್ ಬೇಸರ ವ್ಯಕ್ತಪಡಿಸಿದರು.
    ಮತಾಂತರ ತಡೆಯಲು ಹೋದವರ ಮೇಲೆ ಜಾತಿ ನಿಂದನೆ ಮತ್ತು ಅತ್ಯಾಚಾರದ ಪ್ರಕರಣ ಹಾಕುತ್ತಾರೆಂದು ಶಾಸಕರು ಆರೋಪಿಸಿದ್ದಾರೆ. ಆದರೆ ಅಂತಹ ಒಂದು ಪ್ರಕರಣವೂ ದಾಖಲಾಗಿಲ್ಲ. ನಮ್ಮ ಮೇಲೆಯೇ ನಿರಂತರ ದೌರ್ಜನ್ಯ, ದಬ್ಬಾಳಿಕೆ ಮುಂದುವರಿದಿವೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
    ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲವಾಗಿದ್ದು ಅಧಿವೇಶನದಲ್ಲಿ ಇಡೀ ಕ್ರೈಸ್ತರನ್ನು ಗುರಿಯಾಗಿರಿಸಿ ಮಾತನಾಡಿದ್ದಾರೆ. ಸದನದಲ್ಲಿ ಚರ್ಚಿಸಿ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಮತಾಂತರ ವಿರೋಧಿ ಕಾನೂನು ಜಾರಿಗೆ ತರುವುದಕ್ಕೆ ಅಭ್ಯಂತರವಿಲ್ಲ. ಆದರೆ ಸರ್ಕಾರ ಈ ವಿಷಯದ ಕುರಿತು ಸವಿಸ್ತಾರವಾಗಿ ಚರ್ಚಿಸಬೇಕು ಎಂದು ಆಗ್ರಹಿಸಿದರು. ಸಮುದಾಯದ ಮುಖಂಡರಾದ ಜೆ. ಭಾಸ್ಕರ್ ಬಾಬು, ಎಂ.ಎಸ್.ಸ್ಯಾಮ್ಯುಯೆಲ್, ಹರೀಶ್, ಶಿವರಾಜ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts