More

    ಅತಿಥಿ ಉಪನ್ಯಾಸಕರ ಸೇವೆ ವಿಲೀನಕ್ಕೆ ವಿರೋಧ

    ಶಿವಮೊಗ್ಗ: ಕೆಸಿಎಸ್ (ಕರ್ನಾಟಕ ನಾಗರಿಕ ಸೇವೆ)ನಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು ವಿಲೀನಗೊಳಿಸುವುದು ಮತ್ತು ನಿಯಮ ಬಾಹಿರ 2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ತಡೆಹಿಡಿಯುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಡಾ. ಎಚ್.ಸೋಮಶೇಖರ್ ಶಿಮೊಗ್ಗಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಉಪನ್ಯಾಸಕರು, ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಕೆಸಿಎಸ್‌ನಡಿ ನೇಮಕಾತಿ ನಿಯಮಗಳ ಅನ್ವಯ ತಾತ್ಕಲಿಕ ನೌಕರರಾಗಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ವಿಲೀನಗೊಳಿಸಬೇಕು ಎಂದು ಆಗ್ರಹಿಸಿದರು.
    ಈ ಸಂಬಂಧ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಬೇಕು. ಈ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ತಡೆಹಿಡಿಯಬೇಕು ಎಂದು ಮನವಿ ಮಾಡಿದರು. ಸಮಿತಿ ರಾಜ್ಯ ಖಜಾಂಚಿ ಕೆ.ರಾಜೇಶ್‌ಕುಮಾರ್, ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಕಾರ್ಯದರ್ಶಿ ಎಸ್.ವಿ.ಸತೀಶ್, ರಾಘವೇಂದ್ರ, ಮಹಿಳಾ ಸಂಯೋಜಕಿ ಎನ್.ಜೆ.ದೀಪಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts