More

    ಮುರುಘಾ ಶರಣರ ಮೇಲೆ ತನಿಖೆ, ಸರ್ಕಾರ ಹಸ್ತಕ್ಷೇಪ ಮಾಡಲ್ಲ

    ಶಿವಮೊಗ್ಗ: ಚಿತ್ರದುರ್ಗದ ಮುರುಘಾಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಶರಣರ ಮೇಲೆ ಕೇಳಿಬಂದಿರುವ ಆರೋಪದ ಬಗ್ಗೆ ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ವಿವರಣೆ ನೀಡಲು ಸಾಧ್ಯವಿಲ್ಲ. ಮುರುಘಾ ಮಠಕ್ಕೆ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿದೆ. ಭದ್ರತೆಗೆ 7 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ ಎಂದರು.
    8ಕ್ಕೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ: ರಾಜ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಆಸಕ್ತಿ ಇದೆ. ತಿಂಗಳಿಗೊಮ್ಮೆ ಭೇಟಿ ನೀಡುವುದಾಗಿ ಹೇಳಿದ್ದಾರೆ. ಮುಂಬರುವ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ. ಸೆ. 8ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಆರಗ ಜ್ಞಾನೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪಕ್ಷ ಗೌರವ ಸಲ್ಲಿಸಿದೆ. ರಾಜ್ಯಾದ್ಯಂತ ಪ್ರವಾಸಕ್ಕೆ ಅವರು ಸಿದ್ಧರಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗಲಿದೆ ಎಂದರು.
    ಜಬೀಗೆ ಭಯೋತ್ಪಾದಕರ ನಂಟು: ಗಾಂಧಿಬಜಾರ್‌ನಲ್ಲಿ ಪ್ರೇಮ್‌ಸಿಂಗ್ ಚೂರಿ ಇರಿತ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಜಬೀ ಅಲಿಯಾಸ್ ಚರ್ಬಿಗೆಗೆ ಇರುವ ಲಿಂಕ್ ಭಯಾನಕವಾಗಿದೆ. ಭಯೋತ್ಪಾದಕರ ಜತೆ ಸಂಬಂಧ ಇರುವುದು ಬಹಿರಂಗವಾಗುತ್ತಿದೆ. ಸದ್ಯದಲ್ಲೇ ಈ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದ್ದು ಯುಎಪಿಎದಡಿ ಕೇಸ್ ದಾಖಲಿಸಲಾಗಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts