More

    ಅಧಿಕಾರಿಗಳ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

    ಶಿವಮೊಗ್ಗ: ಮಹಾತ್ಮಗಾಂಧಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತೋರಿಸಿರುವ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕಿ ರೇಖಾ ರಂಗನಾಥ್ ನೇತೃತ್ವದಲ್ಲಿ ಪಾಲಿಕೆ ಸದಸ್ಯರು ಗುರುವಾರ ಪೂರ್ವ ವಲಯ ಐಜಿಸಿ ಕೆ.ತ್ಯಾಗರಾಜನ್ ಅವರಿಗೆ ಮನವಿ ಸಲ್ಲಿಸಿದರು.
    ಆ.14ರಂದು ಪಾಲಿಕೆ ಒಡೆತನಕ್ಕೆ ಸೇರಿದ ಸಿಟಿ ಸೆಂಟರ್ ಮಾಲ್‌ನಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಕೇಂದ್ರ ಸರ್ಕಾರದ ಪ್ರಯೋಜಿತ ದೇಶ ವಿಭಜನೆಯ ಭಯಾನಕಥೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾತ್ಮಗಾಂಧಿ, ಸುಭಾಷ್‌ಚಂದ್ರಬೋಸ್, ಜವಾಹರಲಾಲ್ ನೆಹರು, ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಕಿರಿದಾದ ಸ್ಥಳದಲ್ಲಿ ಅಳವಡಿಸುವುದರ ಮೂಲಕ ಅಗೌರವ ತೋರಿದ್ದಾರೆಂದು ದೂರಿದರು.
    ಈ ಘಟನೆಯೂ ಭಾರತೀಯ ನಾಗರೀಕರದ ನಮಗೆ ತೀವ್ರ ನೋವುಂಟು ಮಾಡಿದೆ. ಅಮೃತ ಮಹೋತ್ಸವ ಪಾವಿತ್ರತೆಗೆ ಹಾಗೂ ಆಶಯಕ್ಕೆ ಅಗೌರವ ಉಂಟುಮಾಡಿದೆ. ಅಗೌರವ ತೋರಿಸಿದ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
    ಸದಸ್ಯರಾದ ಯಮುನಾ ರಂಗೇಗೌಡ, ಎಚ್.ಸಿ.ಯೋಗೀಶ್, ಬಿ.ಎ.ರಮೇಶ್ ಹೆಗಡೆ, ಆರ್.ಸಿ.ನಾಯ್ಕ, ಮಂಜುಳಾ ಶಿವಣ್ಣ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್ ಇನ್ನಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts