Friday, 16th November 2018  

Vijayavani

Breaking News

ಸಮ್ಮಿಶ್ರ ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್​ರಿಂದ​ ಗಡುವು: ಕೆ.ಎಸ್​. ಈಶ್ವರಪ್ಪ

Wednesday, 12.09.2018, 1:51 PM       No Comments

ಶಿವಮೊಗ್ಗ: ರಾಜ್ಯ ಸರ್ಕಾರ ಇಲ್ಲ ಎಂದು ಬಿಜೆಪಿ ಹೇಳಬೇಕಾಗಿಲ್ಲ. ಬದಲಾಗಿ ಸಮ್ಮಿಶ್ರ ಸರ್ಕಾರದ ಶಾಸಕರೇ ಹೇಳುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಹಾಗೂ ಹಿರಿಯ ಮುಖಂಡ ಕೆ.ಎಸ್​. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಉರುಳಿಸುವ ಪ್ರಯತ್ನವನ್ನು ಬಿಜೆಪಿ ಮಾಡಲ್ಲ. ತಾನಾಗಿಯೇ ಸರ್ಕಾರ ಉರುಳಿ ಹೋಗಲಿದೆ. ಸರ್ಕಾರಕ್ಕೆ ಜಾರಕಿಹೊಳಿ ಬ್ರದರ್ಸ್​ ಗಡುವು ನೀಡಿದ್ದಾರೆ ಎಂದು ಹೇಳಿದರು.

ಬಿಜೆಪಿಯ 104 ಶಾಸಕರು ಹುಲಿಗಳಿದ್ದಂತೆ
ಬಿಜೆಪಿಯ 5 ಶಾಸಕರನ್ನು ನಾವು ಸೆಳೆಯುತ್ತೇವೆ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಆಪರೇಷನ್ ಕಮಲ ಮಾಡಿದರೇ ಜೆಡಿಎಸ್-ಕಾಂಗ್ರೆಸ್​ನವರು ತಪ್ಪು ಎನ್ನುತ್ತಾರೆ. ತಪ್ಪು-ಸರಿ ಯಾವುದು ಎಂಬುದನ್ನು ರಾಜ್ಯದ ಜನರೇ ನಿರ್ಧರಿಸುತ್ತಾರೆ. ಬಿಜೆಪಿಯ 104 ಶಾಸಕರು ಹುಲಿಗಳಿದ್ದಂತೆ ಯಾರೂ ಮುಟ್ಟಲೂ ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.

ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ
ಲೋಕಸಭಾ ಚುನಾವಣೆಗೆ ಶಿವಮೊಗ್ಗ ಅಭ್ಯರ್ಥಿಗಳ ಪಟ್ಟಿಯಲ್ಲಿ ಈಶ್ವರಪ್ಪ ಹೆಸರು ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಯಾರೋ ಹೇಳಿದ್ದಾರೆ ಎಂದು ಅಭ್ಯರ್ಥಿಯಾಗಲು ಸಾಧ್ಯವಿಲ್ಲ. ಪಕ್ಷದ ನಾಯಕರು, ಹಿರಿಯರು ಬಯಸಿದರೇ ಅವರ ಮಾತನ್ನು ಮೀರಲ್ಲ. ಪಕ್ಷದ ಕಾರ್ಯಕರ್ತನಾಗಿ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದರು.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top