More

    ಕೆ.ಎಸ್.ಈಶ್ವರಪ್ಪ ಅವರನ್ನು ಉಪಮುಖ್ಯಮಂತ್ರಿ ಮಾಡಿ

    ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ, ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಜತೆಗೆ ಪ್ರಮುಖ ಖಾತೆಯನ್ನೂ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟದ ಮುಖಂಡ ಎಚ್.ಎನ್.ಮಂಜುನಾಥ್ ಒತ್ತಾಯಿಸಿದರು.
    ರಾಜ್ಯ ಮತ್ತು ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದವರಲ್ಲಿ ಬಿ.ಎಸ್.ಯಡಿಯೂರಪ್ಪ ನಂತರದ ಸ್ಥಾನದಲ್ಲಿ ಕೆ.ಎಸ್.ಈಶ್ವರಪ್ಪ ಅವರಿದ್ದಾರೆ. ಆದರೂ ಈಶ್ವರಪ್ಪ ಅವರಿಗೆ ಸಿಎಂ ಸ್ಥಾನ ವಂಚಿತರಾಗಿರುವುದು ಅವರ ಅಭಿಮಾನಿಗಳು, ಬೆಂಬಲಿಗರಿಗೆ ನೋವು ತಂದಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.
    ಜಿಲ್ಲೆ ಮತ್ತು ನಗರದ ಕೊಳಚೆ ಪ್ರದೇಶ, ದಲಿತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಕಾಂಕ್ರಿಟ್ ರಸ್ತೆ, ಬಾಕ್ಸ್ ಚರಂಡಿ, ವಸತಿ, ಸಮುದಾಯ ಭವನ ಸೇರಿ ಅನೇಕ ಕೆಲಸ ಮಾಡಿಕೊಟ್ಟಿದ್ದಾರೆ. ಒಂದು ಜಾತಿಗೆ ಸೀಮಿತವಾಗದೇ ಎಲ್ಲ ವರ್ಗಗಳಿಗೆ ಕೆಲಸ ಮಾಡಿದ್ದಾರೆ. ಅಂತಹ ನಾಯಕರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಹಾಗಾಗಿ ಈಶ್ವರಪ್ಪ ಅವರಿಗೆ ಡಿಸಿಎಂ ಮತ್ತು ಪ್ರಮುಖ ಖಾತೆಯನ್ನೂ ನೀಡಬೇಕು ಎಂದು ಆಗ್ರಹಿಸಿದರು.
    ಪ್ರಮುಖರಾದ ಎಚ್.ಶಿವಾಜಿ, ರಾಜಕುಮಾರ್, ರಂಗಪ್ಪ, ಪ್ರಕಾಶ್ ಲಿಗಾಡಿ, ಸಿ.ಮೂರ್ತಿ, ಎಸ್. ನಾಗರಾಜ್, ಎಚ್.ಎನ್.ಪ್ರಭು, ಹಾಲಪ್ಪ, ಯೋಗೀಶ್, ಜಗದೀಶ್, ಎಂ.ರಾಜು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts