More

    18ಕ್ಕೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

    ಸಾಗರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಏ. 18ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಗ್ರಾಮಾಂತರ ಮಂಡಲದ ಮಾಧ್ಯಮ ಪ್ರಮುಖ್ ಹು.ಭಾ.ಅಶೋಕ್ ತಿಳಿಸಿದ್ದಾರೆ.
    ಅಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಮುಖರಾದ ಟಿ.ಡಿ.ಮೇಘರಾಜ್, ಅರಗ ಜ್ಞಾನೇಂದ್ರ, ಶಾರದಾ ಪೂರ‌್ಯಾನಾಯ್ಕಾ, ಹರತಾಳು ಹಾಲಪ್ಪ, ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ. ಮೇ 7ರಂದು ನಡೆಯಲಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಅಗತ್ಯ ಸಿದ್ಧತೆ ನಡೆಸಿದೆ ಎಂದರು.
    ಬಿ.ವೈ.ರಾಘವೇಂದ್ರ ಅವರು ಸಾಗರ, ಹೊಸನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಮಾಡಿ ಮತದಾರರ ಬಳಿ ಮತಯಾಚಿಸುತ್ತಿದ್ದಾರೆ. ವಿ.ಮಹೇಶ್ ನೇತೃತ್ವದ ಚುನಾವಣಾ ನಿರ್ವಹಣಾ ಸಮಿತಿ ಗಣಪತಿ ಬೆಳಗೋಡು ಅವರ ಉಸ್ತುವಾರಿಯಲ್ಲಿ ಎಲ್ಲ ಸಿದ್ಧತೆ ನಡೆಸಿದೆ. ಬಿ.ವೈ.ರಾಘವೇಂದ್ರ ಕರೂರು, ಭಾರಂಗಿ ಹೋಬಳಿಯಲ್ಲಿ ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರದ ಸಾಧನೆ, ತಾವು ಸಂಸದರಾಗಿ ಕ್ಷೇತ್ರಕ್ಕೆ ತಂದ ಯೋಜನೆಗಳನ್ನು ತಿಳಿಸಿದ್ದಾರೆ. ಮಾಜಿ ಸಚಿವ ಹರತಾಳು ಹಾಲಪ್ಪ ಕ್ಷೇತ್ರದ ಜನರ ಸಂಪರ್ಕದಲ್ಲಿದ್ದು ಮತಯಾಚನೆ ನಡೆಸಿದ್ದಾರೆ ಎಂದು ಹೇಳಿದರು.
    ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶಪ್ರಸಾದ್ ಮಾತನಾಡಿ, ಬಿ.ವೈ.ರಾಘವೇಂದ್ರ ಅವರು ಮಾಡಿರುವ ಸಾಧನೆಯೆ ಅವರನ್ನು ಈ ಬಾರಿ ಚುನಾಣೆಯಲ್ಲಿ ಅತಿಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಲಿದೆ. ನರೇಂದ್ರ ಮೋದಿ ಎರಡು ಬಾರಿ ಪ್ರಧಾನಿಯಾದಾಗಲೂ ಒಂದೇ ಒಂದು ಸಣ್ಣ ಹಗರಣ ಕೇಂದ್ರ ಸರ್ಕಾರದಲ್ಲಿ ನಡೆದಿಲ್ಲ. ಇದು ಮತದಾರರ ಬಳಿ ನಮಗೆ ಧೈರ್ಯವಾಗಿ ಮತಯಾಚನೆ ಮಾಡಲು ಸಹಕಾರಿಯಾಗಿದೆ. ಇದರ ಜತೆಗೆ ಸಿಗಂದೂರು ಸೇತುವೆ ನಿರ್ಮಾಣ, ರೈಲ್ವೆ ನಿಲ್ದಾಣ ಅಭಿವೃದ್ಧಿ, ಸೇತುವೆಗಳ ನಿರ್ಮಾಣ ಅವರ ಸಾಧನೆಯ ಮೆಟ್ಟಿಲುಗಳಾಗಿವೆ. ಕೇಂದ್ರದ ಅತಿಹೆಚ್ಚು ಅನುದಾನವನ್ನು ಸದ್ಭಳಕೆ ಮಾಡಿಕೊಂಡ ಸಂಸದರ ಪೈಕಿ ಬಿ.ವೈ.ರಾಘವೇಂದ್ರ ದೇಶದಲ್ಲಿಯೆ ಎರಡನೇ ಸ್ಥಾನ ಪಡೆದಿದ್ದಾರೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಮಧುರಾ ಶಿವಾನಂದ್, ಎಚ್.ಎಸ್.ರಮೇಶ್ ಹಾರೆಗೊಪ್ಪ, ಸತೀಶ್, ಸಂತೋಷ್, ಶ್ರೀಕಂಠೆ ಗೌಡ, ಪ್ರೇಮಾ ಕಿರಣ್ ಸಿಂಗ್, ಸುಮಾ ರವಿ, ರಾಜೇಂದ್ರ ಪೈ, ಶ್ವೇತಾ ಸಂತೋಷ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts