More

    ಜಿಲ್ಲೆಯಲ್ಲಿ ಮಲೇರಿಯಾ ನಿಯಂತ್ರಣ: ಡಾ. ದಿನೇಶ್

    ಶಿವಮೊಗ್ಗ: ಜಿಲ್ಲೆಯಲ್ಲಿ ಮಲೇರಿಯಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಮಲೇರಿಯಾ ಜಿಲ್ಲಾ ಅಧಿಕಾರಿ ಡಾ. ಜಿ.ಸಿ.ದಿನೇಶ್ ಹೇಳಿದರು.
    ನಗರದ ಪ್ರೆಸ್‌ಟ್ರಸ್ಟ್‌ನಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆರೋಗ್ಯ ಕಚೇರಿ ಸಹಯೋಗದಲ್ಲಿ ಶನಿವಾರ ಪತ್ರಕರ್ತರಿಗೆ ಕೀಟ ಜನ್ಯ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಸಾಂಕ್ರಾಮಿಕ ರೋಗಗಳ ಪ್ರಮಾಣ ಸ್ಥಿರವಾಗಿದೆ. ಡೆಂೆ ಪ್ರಮಾಣ ಕೊಂಚ ಏರಿಕೆ ಕಂಡಿದೆ. ಉಳಿದಂತೆ ಮಲೇರಿಯಾ, ಚಿಕೂನ್‌ಗುನ್ಯಾ, ಮಿದುಳು ಜ್ವರ ಕಡಿಮೆ ಆಗಿದೆ. ಮಲೆನಾಡಿನಲ್ಲಿ ಅದರಲ್ಲೂ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
    ಪ್ರಾಸ್ತಾವಿಕ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್, ಗ್ರಾಮೀಣ ಮತ್ತು ನಗರ ಭಾಗದಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜನತೆ ಜಾಗೃತರಾಗಬೇಕಿದೆ. ಸೊಳ್ಳೆಗಳ ಕಡಿತದಿಂದ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಪ್ರತಿ ವರ್ಷ ಜೂನ್ ತಿಂಗಳಲ್ಲಿ ಮಲೇರಿಯಾ ಮಾಸ ಆಚರಿಸಲಾಗುತ್ತಿತ್ತು. ಆದರೆ ಕರೊನಾ ಕಾರಣ ಈ ರ್ಷ ಜುಲೈನಲ್ಲಿ ಆಚರಿಸಲಾಗುತ್ತಿದೆ. ಕೇಂದ್ರ ಸರ್ಕಾರ 2025ರ ವೇಳೆಗೆ ಮಲೇರಿಯಾ ಮುಕ್ತ ದೇಶ ಮಾಡುವ ಸಂಕಲ್ಪ ತೊಟ್ಟಿದ್ದು ಅದಕ್ಕಾಗಿ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೆಸ್‌ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ತಂತ್ರಜ್ಞಾನ ಬೆಳೆದಿದ್ದರೂ ಅನೇಕ ಕಾಯಿಲೆಗಳಿಂದ ತಲ್ಲಣ ಸೃಷ್ಟಿಯಾಗಿದ್ದು ಸಾಂಕ್ರಾಮಿಕ ರೋಗಗಳ ತಡೆಗೆ ಎಲ್ಲ ಗ್ರಾಪಂಗಳ ಪಿಡಿಒ, ಅಧ್ಯಕ್ಷರಿಗೆ ಜಾಗೃತಿ ಮೂಡಿಸುವ ಕಾರ್ಯಗಾರ ಆಯೋಜಿಸಬೇಕಿದೆ ಎಂದು ಸಲಹೆ ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರತಿಮಾ, ಪರಶುರಾಮ ನಾಯ್ಕ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts