More

    ಪ್ರತಿಪಕ್ಷದ ಜವಾಬ್ದಾರಿ ನಿರ್ವಹಿಸಲು ಕಾಂಗ್ರೆಸ್ ವಿಫಲ: ಸಚಿವ ಈಶ್ವರಪ್ಪ ಗೇಲಿ

    ಶಿವಮೊಗ್ಗ: ಪ್ರತಿಪಕ್ಷದ ಜವಾಬ್ದಾರಿ ನಿರ್ವಹಣೆಯಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಗೇಲಿ ಮಾಡಿದ್ದಾರೆ.
    ಕರೊನಾ ಸೋಂಕು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಟೀಕೆ ಮಾಡುತ್ತಿದ್ದಾರೆ. ವಾಸ್ತವವಾಗಿ ಪ್ರತಿಪಕ್ಷವಾಗಿ ಕಾಂಗ್ರೆಸ್ ವಿಫಲವಾಗಿದೆ. ರಾಜ್ಯ ಸರ್ಕಾರವನ್ನು ಟೀಕೆ ಮಾಡುವ ನೈತಿಕತೆಯೇ ಕಾಂಗ್ರೆಸ್ ಮುಖಂಡರಿಗೆ ಇಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.
    ಎಲ್ಲರಿಗೂ ಉಚಿತವಾಗಿ ವ್ಯಾಕ್ಸಿನ್ ಕೊಡಿ ಎಂದು ಕಾಂಗ್ರೆಸ್ ನಾಯಕರು ಈಗ ಹೇಳುತ್ತಿದ್ದಾರೆ. ಆದರೆ ಈ ಮೊದಲು ವ್ಯಾಕ್ಸಿನ್‌ಗೆ ವಿರೋಧ ಮಾಡಿದವರೇ ಅವರು. ಬಿಜೆಪಿ ವ್ಯಾಕ್ಸಿನ್ ಎಂದು ಅಪಪ್ರಚಾರ ಮಾಡಿ ಜನ ಲಸಿಕೆ ಹಾಕಿಸಿಕೊಳ್ಳದಂತೆ ಮಾಡಿದರು. ರಾಷ್ಟ್ರೀಯ ನಾಯಕರಾದ ಜೈರಾಮ್ ರಮೇಶ್, ವೇಣುಗೋಪಾಲ್ ಸೇರಿ ಹಲವರು ವ್ಯಾಕ್ಸಿನ್ ಬಗ್ಗೆ ಗೇಲಿ ಮಾಡಿದರು. ಆದರೆ ಇದೀಗ ಅವರೇ ಲಸಿಕೆಗಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ ಎಂದು ಲೇವಡಿ ಮಾಡಿದರು.
    ಪ್ರಧಾನಿ ನರೇಂದ್ರ ಮೋದಿ ಅವರು ದೇಶವೇ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಉಚಿತವಾಗಿ ಲಸಿಕೆ, ನವೆಂಬರ್‌ವರೆಗೆ ಪಡಿತರ ವಿತರಣೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದೆ ಎಂದು ದೂರಿದರು.
    ಪೆಟ್ರೋಲ್, ಡಿಸೇಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯ, ದೇಶದಲ್ಲಿ ಕಾಂಗ್ರೆಸ್ ಇನ್ನೂ ಬದುಕಿದೆ ಎಂಬುದನ್ನು ಸಾಬೀತುಪಡಿಸುವ ಪ್ರಯತ್ನ ಇದು ಎಂದು ಕುಟುಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts