More

    ಆತ್ಮವಿಶ್ವಾಸ, ಶ್ರದ್ಧೆ ಇದ್ದಲ್ಲಿ ಉದ್ಯಮದಲ್ಲಿ ಯಶಸ್ಸು; ಎನ್.ಗೋಪಿನಾಥ್

    ಶಿವಮೊಗ್ಗ: ಆತ್ಮವಿಶ್ವಾಸ ಹಾಗೂ ಶ್ರದ್ಧೆಯಿಂದ ಮುನ್ನಡೆದರೆ ಮಹಿಳೆಯರು ಉದ್ಯಮ ಕ್ಷೇತ್ರದಲ್ಲಿ ಯಶಸ್ವಿಯಾಗುವ ಜತೆಯಲ್ಲಿ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬಹುದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು.
    ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಸ್ವೇದ ಮಹಿಳಾ ಸಂಘಟನೆ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಜಿಲ್ಲಾ ಘಟಕದ ಸಹಯೋಗದಲ್ಲಿ ಬುಧವಾರ ಕೌಶಲಾಭಿವೃದ್ಧಿ ಕಾರ್ಯಕ್ರಮ ಮತ್ತು ಕ್ಯಾನ್ಸರ್ ಉಚಿತ ತಪಾಸಣಾ ಜಾಗೃತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
    ಸ್ವೇದ ಮಹಿಳಾ ಸಂಸ್ಥೆಯು ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಜತೆಯಲ್ಲಿ ಮಾರ್ಗದರ್ಶನ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮಹಿಳೆಯರು ಮನೆಗಳಲ್ಲಿ ತಯಾರಿಸುವ ಆಹಾರ, ತಿನಿಸು, ಕರಕುಶಲ ವಸ್ತುಗಳ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸುವ ಕೆಲಸ ಮಾಡುತ್ತಿದೆ. ಮಹಿಳೆಯರು ಸರ್ಕಾರದ ಆರ್ಥಿಕ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
    ಸ್ವೇದ ಮಹಿಳಾ ಸಂಘಟನೆ ಅಧ್ಯಕ್ಷೆ ಲಕ್ಷ್ಮೀದೇವಿ ಗೋಪಿನಾಥ್ ಮಾತನಾಡಿ, ಮಹಿಳೆಯರು ಸಬಲೀಕರಣಗೊಳ್ಳಲು ಸ್ವೇದ ಸಂಘಟನೆ ವೇದಿಕೆ ಒದಗಿಸುತ್ತಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ, ಸ್ವಸಾಮರ್ಥ್ಯದಿಂದ ದುಡಿದು ಜೀವನ ರೂಪಿಸಿಕೊಳ್ಳಲು ಆಸಕ್ತಿ ಇರುವ ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
    ಸ್ವೇದ ಮಹಿಳಾ ಸಂಘಟನೆ ಕಾರ್ಯದರ್ಶಿ ಶಿಲ್ಪಾ ಗೋಪಿನಾಥ್ ಮಾತನಾಡಿ, ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ತರಬೇತಿ ಕಾರ್ಯಕ್ರಮಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದರು. ಬೆಂಗಳೂರಿನ ಮಹಾದೇವ್ ವಿಶೇಷ ಉಪನ್ಯಾಸ ನೀಡಿದರು. ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕ ಗಣೇಶ್ ಅಂಗಡಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts