More

    ಆಪರೇಷನ್ ಕಮಲ ಬಿಜೆಪಿಗೆ ರೋಗವಿದ್ದಂತೆ: ಮಧು ಬಂಗಾರಪ್ಪ ಗೇಲಿ

    ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಎಂದಿಗೂ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿಲ್ಲ. ಹಿಂದಿನ ಬಾಗಿಲ ಮೂಲಕವೇ ಅಧಿಕಾರ ನಡೆಸುತ್ತಿದೆ. ಬಿಜೆಪಿಯವರಿಗೆ ಆಪರೇಷನ್ ಕಮಲ ಮಾಡುವುದು ಒಂದು ರೀತಿಗೆ ರೋಗ ಮತ್ತು ಚಟವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಗೇಲಿ ಮಾಡಿದರು.
    ಗುಜರಾತ್‌ನಲ್ಲಿ ಬಿಜೆಪಿ ನಿರೀಕ್ಷೆಯಂತೆ ಹೆಚ್ಚು ಸ್ಥಾನ ಪಡೆದಿದೆ. ಆದರೆ ಅಲ್ಲಿನ ಚುನಾವಣಾ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹವಾ ತಗ್ಗಿರುವುದು ಫಲಿತಾಂಶದಿಂದ ಸಾಬೀತಾಗಿದೆ. ಕಳೆದ ಬಾರಿ 44 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ 28ಕ್ಕಿಳಿದಿದೆ. ಜನರ ತೀರ್ಮಾನಕ್ಕೆ ಎಲ್ಲರೂ ತಲೆಬಾಗಲೇ ಬೇಕಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈ ಬಾರಿ ರಾಜ್ಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ತನ್ನನ್ನೂ ಒಳಗೊಂಡಂತೆ ಯಾರಿಗೂ ಇನ್ನೂ ಟಿಕೆಟ್ ಫೈನಲ್ ಆಗಿಲ್ಲ. ಒಂದೇ ಕ್ಷೇತ್ರಕ್ಕೆ ಸಾಕಷ್ಟು ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ. ಅರ್ಜಿ ಸಲ್ಲಿಸಿದ ಮಾತ್ರಕ್ಕೆ ಗೊಂದಲ ಅಥವಾ ಅಭ್ಯರ್ಥಿಗಳಲ್ಲೇ ಸ್ಪರ್ಧೆ ಇದೆ ಎಂದು ಭಾವಿಸಬೇಕಿಲ್ಲ. ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದಾಗ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಕ್ರಮ ನಿಶ್ಚಿತ ಎಂದು ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷ ವಿರೋಧಿ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿದ್ದಾರೆ. ಪಕ್ಷದ ಘನತೆಗೆ ಭಂಗ ತಂದರೆ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts