More

    ರಾಜಕಾರಣದಲ್ಲಿ ಇನ್ನೆರಡು ಅವಧಿ ಸಕ್ರಿಯ: ಬಿಎಸ್‌ವೈ ಘೋಷಣೆ

    ಶಿವಮೊಗ್ಗ: ನಾನು ರಾಜಕೀಯದಿಂದ ನಿವೃತ್ತಿ ಪಡೆದಿಲ್ಲ. ನನಗೀಗ 80 ವರ್ಷ ತುಂಬುತ್ತಿದೆ. ಈ ಚುನಾವಣೆ ಸೇರಿ ಇನ್ನೂ ಎರಡು ಅವಧಿ (5-10 ವರ್ಷ) ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ನನ್ನನ್ನೂ ಯಾರೂ ಮೂಲೆಗುಂಪು ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
    ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಎರಡು ದಿನ ರಾಜ್ಯ ಪ್ರವಾಸ ಕೈಗೊಂಡು ಯಾವ ಯಾವ ಕ್ಷೇತ್ರದಲ್ಲಿ ಗೆಲ್ಲಬೇಕು. ಹೇಗೆಲ್ಲಾ ಕೆಲಸ ಮಾಡಬೇಕೆಂದು ಸವಿಸ್ತಾರವಾಗಿ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿದ್ದು 140ರಿಂದ 150 ಸ್ಥಾನಗಳಲ್ಲಿ ಗೆದ್ದು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ತಯಾರಿ ಮಾಡಲಾಗುತ್ತಿದೆ ಎಂದರು.
    ಕೇಂದ್ರದ ನಾಯಕರು ವಿಧಾನಸಭೆ ಚುನಾವಣೆಗೆ ಸಜ್ಜಾಗುವ ಜತೆಗೆ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ನನಗೆ ಹೆಚ್ಚಿನ ಸಮಯ ನೀಡಿ ಹಳ್ಳಿಗೆ ಪ್ರವಾಸ ಮಾಡಿ ಎಂದು ಸಲಹೆ ನೀಡಿದ್ದಾರೆ. ಅಧಿವೇಶನ ಮುಗಿದ ಮೇಲೆ ಕಾರ್ಯಕರ್ತರೊಂದಿಗೆ ರಾಜ್ಯ ಪ್ರವಾಸ ಆರಂಭವಾಗಲಿದೆ. ಅಮಿತ್ ಶಾ ನೀಡಿರುವ ಗೆಲ್ಲುವ ಟಾರ್ಗೆಟ್ ಅನ್ನು ಸವಾಲಾಗಿ ಸ್ವೀಕರಿಸಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಹೇಳಿದರು.
    ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಅವರು ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಮೇಲೆಯೂ ಎಲ್ಲೆ ಹೋದರೂ ಯಡಿಯೂರಪ್ಪ ಎಂಬ ಘೋಷಣೆಗಳು ಕೇಳಿ ಬರುತ್ತಿದೆ. ಅಧಿಕಾರ, ಸ್ಥಾನಮಾನ ಇಲ್ಲದೆಯೂ ಪಕ್ಷ ಕಟ್ಟಬಹುದು ಎಂಬ ಸವಾಲು ನನ್ನ ಮುಂದಿದೆ. ಆ ಸವಾಲನ್ನು ಸ್ವೀಕರಿಸಿ ಜನರ ಬಳಿ ಹೋಗುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts