More

    7ರಿಂದ ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ: ಡಿಸಿ ಸೆಲ್ವಮಣಿ

    ಶಿವಮೊಗ್ಗ: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಮಕ್ಕಳನ್ನು ಉತ್ತೇಜಿಸುವ ಮತ್ತು ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ ಹೊರತರುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಜ.7ರಿಂದ 9ರವರೆಗೆ ನಗರದ ಕುವೆಂಪು ರಂಗಮಂದಿರ ಮತ್ತು ಡಿವಿಎಸ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಡಿಸಿ ಡಾ. ಆರ್.ಸೆಲ್ವಮಣಿ ತಿಳಿಸಿದರು.
    ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1,300ಕ್ಕೂ ಅಧಿಕ ವಿದ್ಯಾರ್ಥಿಗಳು 23 ವೈಯಕ್ತಿಕ ವಿಭಾಗ ಮತ್ತು 3 ಸಾಮೂಹಿಕ ವಿಭಾಗಗಳಲ್ಲಿ ಭಾಗವಹಿಸುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಮೂರು ದಿನಗಳ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಜ.7ರಂದು ಬೆಳಗ್ಗೆ 11ಕ್ಕೆ ಕುವೆಂಪು ಮಂದಿರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಸೇರಿ ಎಲ್ಲ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪಾಲ್ಗೊಳ್ಳುವರು ಎಂದರು.
    ಸ್ಪರ್ಧೆಗಳು ಪಾರದರ್ಶಕವಾಗಿರುವಂತೆ ನೋಡಿಕೊಳ್ಳಲು ಪ್ರತಿ ಸ್ಪರ್ಧೆಗೆ ಮೂವರಂತೆ ಒಟ್ಟು 78 ತೀರ್ಪುಗಾರರನ್ನು ನೇಮಿಸಿಕೊಳ್ಳಲಾಗಿದೆ. ಪ್ರತಿ ಸ್ಪರ್ಧೆಗೆ ಒಬ್ಬ ಸ್ಥಳೀಯರು ಮತ್ತು ಹೊರ ಜಿಲ್ಲೆಗಳ ಇಬ್ಬರು ತೀರ್ಪುಗಾರರನ್ನು ಕಡ್ಡಾಯಗೊಳಿಸಲಾಗಿದೆ. ಸ್ಪರ್ಧೆಗಳ ಯಶಸ್ಸು ಹಾಗೂ ವ್ಯವಸ್ಥಿತ ನಿರ್ವಹಣೆಗೆ ವಿವಿಧ ಹಲವು ಸಮಿತಿ ರಚಿಸಿದ್ದು, ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.
    ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಜಿಪಂ ಸಿಇಒ ಎನ್.ಡಿ.ಪ್ರಕಾಶ್, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಬಿಇಒಗಳಾದ ಕೆ.ಬಿ.ಲೋಕೇಶಪ್ಪ, ರಾಮಪ್ಪಗೌಡ, ಡಯಟ್ ಪ್ರಾಚಾರ್ಯ ಬಸವರಾಜಪ್ಪ, ವಿಷಯ ಪರಿವೀಕ್ಷಕ ಎಂ.ಸತೀಶ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts