ಶಿವಮೊಗ್ಗ: ಮದುವೆ ಆಗುವುದಾಗಿ ನಂಬಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆಯ ಸಾಗರದ ಖಾಸಗಿ ಕಾಲೇಜಿನ ಉಪನ್ಯಾಸಕನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣದಲ್ಲಿ ಮೊದಲ ತಲೆದಂಡ: ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅಮಾನತು
ಪುನೀತ್ ಬಂಧಿತ ಉಪನ್ಯಾಸಕ. ಸಾಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ಉಪನ್ಯಾಸಕನಾಗಿರುವ ಪುನೀತ್ ನನ್ನು ಶಿವಮೊಗ್ಗದ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಆರೋಪದಲ್ಲಿ ಬಂಧಿಸಲಾಗಿದೆ.
ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸಿಕೊಡ್ತೇನೆ ಅಂತೇಳಿ ವಿದ್ಯಾರ್ಥಿನಿ ಜತೆ ಸ್ನೇಹ ಬೆಳೆಸಿದ್ದ. ಸ್ನೇಹ ನಂತರ ಮದುವೆಯಾಗುವುದಾಗಿ ನಂಬಿಸಿದ್ದ ಉಪನ್ಯಾಸಕ ತದನಂತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಆರೋಪಿ ಉಪನ್ಯಾಸಕ ಪುನೀತ್ ನನ್ನು ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಯನ್ನು ಮುಂದುವರಿಸಿದ್ದಾರೆ.