More

    ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 73,918 ಪ್ರಕರಣ ಇತ್ಯರ್ಥ

    ಶಿವಮೊಗ್ಗ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ ಹಾಗೂ ವ್ಯಾಜ್ಯಪೂರ್ವ 73,918 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು. ಇದರೊಂದಿಗೆ ಇದೇ ಮೊದಲ ಬಾರಿಗೆ ಜಿಲ್ಲೆಯ ಎಲ್ಲ 33 ಪೀಠಗಳಲ್ಲಿ ಒಂದೇ ದಿನ 70 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ರಾಜೀ ಸಂಧಾನಕ್ಕೆ ಒಳಪಡಿಸಿ ದಾಖಲೆ ನಿರ್ಮಿಸಿತು.
    ಪ್ರಕರಣಗಳನ್ನು ರಾಜೀ ಮಾಡಿಸಲು ಶಿವಮೊಗ್ಗದಲ್ಲಿ 16, ಭದ್ರಾವತಿಯಲ್ಲಿ 7, ಸಾಗರ, ತೀರ್ಥಹಳ್ಳಿಯಲ್ಲಿ ತಲಾ 4, ಶಿಕಾರಿಪುರದಲ್ಲಿ 3 ಹಾಗೂ ಹೊಸನಗರ, ಸೊರಬದಲ್ಲಿ ತಲಾ 2 ಪೀಠ ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ ರಾಜೀ ಸಂಧಾನ ನಡೆಯಿತು. ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 8,172 ಹಾಗೂ ವ್ಯಾಜ್ಯಪೂರ್ವ 65,746 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.
    ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪೆನಿಗಳ ಹಾಗೂ ಬ್ಯಾಂಕ್ ಅಧಿಕಾರಿಗಳು, ಪ್ಯಾನಲ್ ವಕೀಲರು, ಅರ್ಜಿದಾರರ ಪರ ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್ ಸೇರಿದಂತೆ ಹಿರಿಯ ನ್ಯಾಯಾಧೀಶರು, ಕಿರಿಯ ನ್ಯಾಯಾಧೀಶರು, ವಕೀಲರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts