More

    13 ಕೋಟಿ ರೂ. ವೆಚ್ಚದಲ್ಲಿ ತ್ಯಾವರೆಕೊಪ್ಪ ಸಿಂಹಧಾಮ ಅಭಿವೃದ್ಧಿ

    ಶಿವಮೊಗ್ಗ: ತ್ಯಾವರೆಕೊಪ್ಪ ಸಿಂಹಧಾಮವನ್ನು 13 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣ ಅಭಿವೃದ್ಧಿಪಡಿಸಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.

    ಬುಧವಾರ ಸಿಂಹಧಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಮೃಗಾಲಯ ಪ್ರಾಧಿಕಾರ ತ್ಯಾವರೆಕೊಪ್ಪ ಸಿಂಹಧಾಮದ ಅಭಿವೃದ್ಧಿಗೆ ಐದು ಕೋಟಿ ರೂ., ರಾಜ್ಯ ಸರ್ಕಾರ ಐದು ಕೋಟಿ ರೂ., ಮೈಸೂರು ಮೃಗಾಲಯ ಪ್ರಾಧಿಕಾರ ಮೂರು ಕೋಟಿ ರೂ. ನೀಡಲಿದ್ದು ಒಟ್ಟು 13 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

    ಸಿಂಹಧಾಮದ 120 ಹೆಕ್ಟೇರ್ ಪ್ರದೇಶವನ್ನು ವಿಶೇಷ ರೀತಿಯಲ್ಲಿ ಅಭಿವೃದ್ಧಿಪಡಿ ಹೊಸ ಪ್ರಾಣಿಗಳನ್ನು ಇಲ್ಲಿಗೆ ತರಲು ಪ್ರಯತ್ನ ನಡೆದಿದೆ. ಸಫಾರಿಗೆ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಜೋಗ ಅಭಿವೃದ್ಧಿಗೆ 130 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧವಾಗಿದೆ. ಸಕ್ರೆಬೈಲು ಆನೆ ಬಿಡಾರದ ಸಮೀಪ ತುಂಗಾ ಹಿನ್ನೀರಿನಲ್ಲಿರುವ ದ್ವೀಪಕ್ಕೆ ಸಂಪರ್ಕ ಕಲ್ಪಿಸುವ ಜತೆಗೆ ದ್ವೀಪದ ಅಭಿವೃದ್ಧಿಗೂ ಚಿಂತನೆ ನಡೆದಿದೆ. ಆನೆ ಬಿಡಾರದ ಎದುರಿರುವ ಜಂಗಲ್ ಲಾಡ್ಜ್ ಪ್ರದೇಶದಲ್ಲಿ ಸಫಾರಿಗೆ ಯೋಜನೆ ರೂಪಿಸಲಾಗುವುದು ಎಂದರು.

    ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದ್​ಚಂದ್ರ, ಆರ್ಯವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಸುವರ್ಣಾ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts