More

    ಸಿದ್ದರಾಮಯ್ಯ ಎರಡಲ್ಲ, 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಗೆಲ್ಲಲ್ಲ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎರಡಲ್ಲ, 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದರೂ ಗೆಲ್ಲುವುದಿಲ್ಲ. ರಾಜ್ಯದ ಜನರೇ ಅವರನ್ನು ಸ್ಪರ್ಧೆ ಮಾಡಿದಲೆಲ್ಲ ಸೋಲಿಸುತ್ತಾರೆ. ಇದು ನಿಶ್ಚಿತ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಅವರದೇ ಪಕ್ಷದವರೇ ಸೋಲಿಸುವುದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಹಾಗಾಗಿ ಅವರು ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಗೆದ್ದು ಬರುವುದಿಲ್ಲ ಎಂದರು.
    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದಾರೆ. ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಅವರ ಸೋಲಿಗೆ ಇದೇ ಸಿದ್ದರಾಮಯ್ಯ ಕಾರಣ. ಇನ್ನೂ ಕೆಲವರ ಸೋಲಿನಲ್ಲೂ ಇವರ ಪಾತ್ರ ಇದೆ. ಆ ಕಾರಣಕ್ಕೆ ಸಿದ್ದರಾಮಯ್ಯ ಬಾದಮಿ ಬಿಟ್ಟು ಹೊರಟಿದ್ದಾರೆ. ಕೋಲಾರದಲ್ಲಿ ಮಾಜಿ ಸಚಿವ ಮುನಿಯಪ್ಪ ಅವರನ್ನು ಸೋಲಿಸಿದ್ದನ್ನು ಅಲ್ಲಿಯವರು ಮರೆತಿಲ್ಲ. ಈಗಾಗಲೇ ಮುನಿಯಪ್ಪ ಮತ್ತು ರಮೇಶ್‌ಕುಮಾರ್ ಬಣಗಳ ನಡುವೆ ಜಟಾಪಟಿ ಇದ್ದು ಕೋಲಾರದಲ್ಲಿ ಸಿದ್ದರಾಮಯ್ಯ ಗೆಲುವು ಸಾಧ್ಯವಿಲ್ಲ ಎಂದರು.
    ಸ್ಯಾಂಟ್ರೋ ರವಿ ಒಬ್ಬ ನೀಚ: ಸ್ಯಾಂಟ್ರೋ ರವಿ ಒಬ್ಬ ನೀಚ. ಹೆಣ್ಣು ಮಕ್ಕಳನ್ನು ಮಾರಾಟ ದಂಧೆ ಮಾಡುತ್ತಿದ್ದ ದುಷ್ಟನನ್ನು ರಾಜ್ಯದಲ್ಲಿ ಹಿಂದೆಂದೂ ನೋಡಿಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು. ಆತ ಮಾಡಿದ ಮುಠ್ಠಾಳ ಕೆಲಸಗಳಿಗೆ ಯಾವುದೇ ಶಿಕ್ಷೆ ನೀಡಿದರೂ ಕಡಿಮೆಯೇ. ತನಿಖೆಯಿಂದ ಆತನ ಜತೆ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್, ಬಿಜೆಪಿ ಯಾರೇ ಇದ್ದರೂ ಹೊರ ಬರುತ್ತದೆ. ಆತನಿಗೆ ಸರಿಯಾದ ಶಿಕ್ಷೆ ಆಗಬೇಕು ಎಂಬುದು ಇಡೀ ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts