More

  ಚೂರಿ ಇರಿತ, ಆರೋಪಿಗಳು ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

  ಶಿವಮೊಗ್ಗ: ಪ್ರೇಮ್‌ಸಿಂಗ್‌ಗೆ ಚಾಕು ಇರಿತ ಪ್ರಕರಣದಲ್ಲಿ ಬಂಧಿತರಾಗಿರುವ ನದೀಮ್, ಅಬ್ದುಲ್ ರೆಹಮಾನ್ ಮತ್ತು ತನ್ವೀರ್‌ನನ್ನು ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಯಿತು.
  ಮೂವರ ಪೊಲೀಸ್ ಕಸ್ಟಡಿ ಗುರುವಾರ ಸಂಜೆ 5ಕ್ಕೆ ಅಂತ್ಯವಾಗಿತ್ತು. ಹಾಗಾಗಿ ಸಂಜೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ತನಿಖೆ ಇನ್ನೂ ಪೂರ್ಣಗೊಳ್ಳದ ಕಾರಣ ಮತ್ತೆರಡು ದಿನ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡರು. ಮನವಿ ಪುರಸ್ಕರಿಸಿದ 5ನೇ ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್, ಆ.20ರವರೆಗೆ ಮೂವರನ್ನೂ ಕಸ್ಟಡಿಗೆ ಪಡೆದುಕೊಳ್ಳುವಂತೆ ಪೊಲೀಸರಿಗೆ ಆದೇಶಿಸಿದರು.
  ಆ.15ರಂದು ಗಾಂಧಿಬಜಾರ್‌ನಲ್ಲಿ ಪ್ರೇಮ್‌ಸಿಂಗ್ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಆ ಬಳಿಕ ನಾಲ್ವರನ್ನು ಬಂಧಿಸಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿ ಮಹಮ್ಮದ್ ಜಬೀ ಅಲಿಯಾಸ್ ಚರ್ಬಿ ಕಾಲಿಗೆ ಮಂಗಳವಾರ ಬೆಳಗಿನಜಾವ ಫೈರಿಂಗ್ ಮಾಡಿ ಸೆರೆ ಹಿಡಿದಿದ್ದರು. ಗಾಯಗೊಂಡ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಾಗಾಗಿ ಮೂವರನ್ನು ಆ.16ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿತ್ತು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts