More

    ತಮ್ಮ ಪ್ರಾಣದ ಜತೆಗೆ ಇತರರಿಗೂ ಕುತ್ತು: ಜಿಪಂ ಸಿಇಒ ವೈಶಾಲಿ ಕಳವಳ

    ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಗಳು, ಹದಿವಯಸ್ಸಿನ ಮಕ್ಕಳು ಅತಿ ವೇಗವಾಗಿ ವಾಹನ ಚಾಲನೆ ಮಾಡಿ ಸಂಚಾರ ನಿಯಮಗಳನ್ನು ಉಲ್ಲಂಘಿಸದೇ ತಮ್ಮ ಪ್ರಾಣದ ಜತೆಗೆ ಇತರರಿಗೂ ಕುತ್ತು ತರುತ್ತಿರುವುದು ಆಘಾತಕಾರಿಯಾಗಿದೆ ಎಂದು ಜಿಪಂ ಸಿಇಒ ಎಂ.ಎಲ್.ವೈಶಾಲಿ ಕಳವಳ ವ್ಯಕ್ತಪಡಿಸಿದರು.
    ಜಿಪಂ ಸಭಾಂಗಣದಲ್ಲಿ ಸಾರಿಗೆ ಇಲಾಖೆಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗುರುವಾರ ಪ್ರೌಢಶಾಲಾ ಮುಖ್ಯ ಅಧ್ಯಾಪಕರಿಗೆ ರಸ್ತೆ ಸುರಕ್ಷತಾ ಆಂದೋಲನ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದ ಅಪಘಾತಗಳನ್ನು ತಪ್ಪಿಸಬಹುದು ಎಂದರು.
    ವಾಹನ ಚಾಲನೆ ವೇಳೆ ಎಲ್ಲರೂ ಜಾಗೃತರಾಗಿರಬೇಕು. ಎಲ್ಲ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಚಾಲನೆಯಲ್ಲಿನ ನಿರ್ಲಕ್ಷ್ಯದಿಂದ ಅಪಘಾತಗಳು ಸಂಭವಿಸಿ ಹೆಚ್ಚಿನ ಸಾವು ನೋವುಗಳಾಗುತ್ತಿವೆ. ನಾವು ಎಚ್ಚರವಾಗಿದ್ದು ಎದುರಿನ ಚಾಲಕ ಸರಿಯಿಲ್ಲದಿದ್ದರೂ ಅಪಘಾತವಾಗುವ ಸಂಭವ ಹೆಚ್ಚಿರುವುದರಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಪಾಲಿಸಬೇಕು ಎಂದರು.
    ಕೆಲವರು ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು, ಟ್ರಾಫಿಕ್ ಸೂಚನೆಗಳನ್ನು ಉಲ್ಲಂಘಿಸುವುದು ಸೇರಿ ನಿಯಮಗಳನ್ನು ಪಾಲಿಸದೇ ಅಪಘಾತಕ್ಕೀಡಾಗುತ್ತಿರುವುದನ್ನು ದಿನನಿತ್ಯ ಕಾಣುತ್ತಿದ್ದೇವೆ. ಇದನ್ನು ತಪ್ಪಿಸಲು ಪ್ರೌಢಶಾಲಾ ಹಂತದಿಂದಲೇ ಶಿಕ್ಷಕರು ವಿದ್ಯಾರ್ಥಿಗಳಿಗೆ, ಶಾಲಾ ಬಸ್ಸುಗಳ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಮಾಹಿತಿ ರವಾನೆ ಮಾಡುತ್ತಿರುವುದು ಉತ್ತಮ ಪ್ರಯತ್ನವಾಗಿದೆ. ಈ ರೀತಿಯ ಪ್ರಯತ್ನದಿಂದ ಸುರಕ್ಷಿತ ನಿಯಮಗಳ ಶಿಸ್ತುಬದ್ಧ ಪಾಲನೆ ಸಾಧ್ಯವಾಗಲಿದೆ ಎಂದು ಆಶಿಸಿದರು.
    ಆರ್‌ಟಿಒ ಜೆ.ಪಿ.ಗಂಗಾಧರ್, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಯುವಜನ ಉಪ ಸಮನ್ವಯಾಧಿಕಾರಿ ಉಮಾಮಹೇಶ್ ಮಾತನಾಡಿದರು. ಕಾರ್ಯಾಗಾರದಲ್ಲಿ ಆರ್‌ಟಿಒ ಇಲಾಖೆ ಅಧಿಕಾರಿ, ಸಿಬ್ಬಂದಿ, ಶಿವಮೊಗ್ಗ, ಭದ್ರಾವತಿ ತಾಲೂಕಿನ ಪ್ರೌಢಶಾಲಾ ಮುಖ್ಯ ಅಧ್ಯಾಪಕರು, ಶಿಕ್ಷಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts