More

    ಜ.21ರಿಂದ ಜಿಲ್ಲೆಯಾದ್ಯಂತ ವಿಜಯ ಸಂಕಲ್ಪ ಅಭಿಯಾನ: ಟಿ.ಡಿ.ಮೇಘರಾಜ್

    ಶಿವಮೊಗ್ಗ: ಜಿಲ್ಲೆಯಾದ್ಯಂತ ಬಿಜೆಪಿಯ ಬೂತ್ ವಿಜಯಿ ಯಾತ್ರೆ ಸಂಪೂರ್ಣ ಯಶಸ್ವಿಯಾಗಿದ್ದು ಜ.21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
    ಕಳೆದ ಜ.2ರಿಂದ 12ರವರೆಗೆ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಬೂತ್ ವಿಜಯಿ ಕಾರ್ಯಕ್ರಮ ನಡೆಸಲಾಯಿತು. ಗ್ರಾಮೀಣ ಮತ್ತು ನಗರ ಭಾಗದ ಪ್ರತಿ ಮನೆ-ಮನೆಗೆ ಭೇಟಿ ನೀಡಿ ಕೇಂದ್ರ ಮತ್ತು ರಾಜ್ಯದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳು, ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಜ.21ರಂದು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡುವರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರು ಪಾಲ್ಗೊಳ್ಳುವರು. ಇದರ ಮೂಲಕ 2 ಕೋಟಿ ಮತದಾರರನ್ನು ತಲುಪುವ ಗುರಿ ಹೊಂದಿದ್ದೇವೆ. 10 ವಿಭಾಗಗಳಲ್ಲಿ, 39 ಸಂಘಟನಾತ್ಮಕ ಜಿಲ್ಲೆಗಳಲ್ಲಿ, 312 ಮಂಡಲಗಳಲ್ಲಿ ಕಾರ್ಯಕರ್ತರು ಬಿಜೆಪಿ ಸಾಧನೆಯನ್ನು ಮನೆಮನೆಗೆ ತಲುಪಿಸುವರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆ ಕುರಿತ ಕರಪತ್ರ ಹಂಚಿಕೆ ಮಾಡಲಾಗುತ್ತದೆ. 1 ಕೋಟಿಗಿಂತ ಹೆಚ್ಚು ಕುಟುಂಬಗಳನ್ನು ಸಂಪರ್ಕ ಮಾಡಲಾಗುತ್ತದೆ ಎಂದರು.
    ಮುಂಬರುವ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದಾದರೊಂದು ಯೋಜನೆಯಲ್ಲಿ ಕುಟುಂಬಗಳು ನೆರವು ಪಡೆದು ಸಬಲೀಕರಣ ಆಗಿರುವ ಬಗ್ಗೆಯೂ ತಿಳಿಸಲಾಗುತ್ತದೆ. ಮನೆ ಮಾಲೀಕರ ಅನುಮತಿ ಪಡೆದು ವಾಹನ, ಮನೆ ಗೋಡೆ ಮೇಲೆ ಸ್ಟಿಕ್ಕರ್ ಅಂಟಿಸಲಾಗುವುದು. ಪ್ರತಿ ಬೂತ್‌ನಲ್ಲಿ ಸಂಘಸಂಸ್ಥೆಗಳು, ಮನೆಯವರ ಅನುಮತಿ ಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಸಾರುವ ಹಾಗೂ ಯೋಜನೆಗಳ ಮಾಹಿತಿ ನೀಡುವ ಗೋಡೆ ಪೇಯಿಂಟಿಂಗ್ ಮಾಡಲಾಗುತ್ತದೆ ಎಂದು ಹೇಳಿದರು.
    ಜಿಲ್ಲಾ ಅಭಿಯಾನದ ಸಹ ಸಂಚಾಲಕ ಎಸ್.ದತ್ತಾತ್ರಿ, ಜಿಲ್ಲಾ ಉಪಾಧ್ಯಕ್ಷ ಬಿ.ಆರ್.ಮಧುಸೂದನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಶ್ರೀನಾಥ್, ಶಿವರಾಜ್, ಗ್ರಾಮಾಂತರ ಅಧ್ಯಕ್ಷ ರತ್ನಾಕರ್‌ಶೆಣೈ, ಜಿಲ್ಲಾ ಮಾಧ್ಯಮ ಪ್ರಮುಖ್ ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts