More

    ರಾಸಾಯನಿಕ ಬಳಕೆ ಹೆಚ್ಚಳ: ಸಂಸದ ಬಿವೈಆರ್ ಆತಂಕ

    ಶಿವಮೊಗ್ಗ: ತಿನ್ನುವ ಅನ್ನ, ಬೆಳೆ ನೀಡುವ ಭೂಮಿ ವಿಷವಾಗಿ ಪರಿಣಮಿಸುತ್ತಿದೆ. ಕೀಟನಾಶಕ, ರಾಸಾಯನಿಕ ಬಳಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾವಯವ ಕೃಷಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸಂಶೋಧನೆಗಳು ಹೆಚ್ಚಬೇಕಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು.
    ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ವಿವಿಯ ಇರುವಕ್ಕಿ ಕ್ಯಾಂಪಸ್‌ನಲ್ಲಿ ಸೋಮವಾರ 10ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರಾಸಾಯನಿಕ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಶೋಧನೆ ನಡೆಸಬೇಕಿದೆ ಎಂದರು.
    ಈ ವಿವಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದು ನಿಶ್ಚಿತ. ವಿದ್ಯಾರ್ಥಿಗಳು ರೈತರ ಹಿತದ ದೃಷ್ಠಿಯಿಂದ ಸಮರ್ಪಕ ಅಧ್ಯಯನ ಕೈಗೊಳ್ಳಬೇಕು. ಕೃಷಿ ಅಭಿವೃದ್ದಿ ಮತ್ತು ರೈತರ ಕಲ್ಯಾಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಎರಡನ್ನು ಸಾಧಿಸುವ ಉದ್ದೇಶ ಹೊಂದಿರುವ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿ ನೀಡಿದ ರೈತರನ್ನು ನಾವು ನೆನೆಯಲೇ ಬೇಕಿದೆ ಎಂದು ಹೇಳಿದರು.
    ವಿವಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನಕ್ಕೆ ಎಲ್ಲ ರೀತಿಯ ವ್ಯವಸ್ಥೆ ಆಗಿದೆ. ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ಸಾಕಾಗುವಷ್ಟು ಮೂಲಭೂತ ಸೌಕರ್ಯವನ್ನು ಈಗಾಗಲೇ ಒದಗಿಸಲಾಗಿದೆ. ಅಭಿವೃದ್ದಿ, ಜೈವಿಕ ತಂತ್ರಜ್ಞಾನ, ತೋಟಗಾರಿಕೆ, ಅರಣ್ಯೀಕರಣ ಸೇರಿದಂತೆ ವಿವಿಧ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಗಳ ಸಂಶೋಧನಾ ಕೇಂದ್ರ ನಿರ್ಮಾಣವಾಗಿದೆ. ಶೈಕ್ಷಣಿಕ ಬ್ಲಾಕ್, ವಿದ್ಯಾರ್ಥಿ ನಿಲಯ ನಿರ್ಮಿಸಲಾಗಿದೆ. ಇದರ ಅಭಿವೃದ್ಧಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಹಕರಿಸಿದ್ದಾರೆ ಎಂದರು.
    ಬೆಕ್ಕಿನ ಕಲ್ಮಠದ ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕುಲಪತಿ ಡಾ.ಆರ್.ಸಿ.ಜಗದೀಶ್, ಕುಲಸಚಿವ ಡಾ.ಆರ್.ಲೋಕೇಶ್, ಆಡಳಿತ ಮಂಡಳಿ ಸದಸ್ಯರಾದ ದೊಡ್ಡಗೌಡ ಸಿ.ಪಾಟೀಲ್, ಕೆ.ನಾಗರಾಜ್, ವೀರಭದ್ರಪ್ಪ ಪೂಜಾರ್, ಡೀನ್ ಡಾ.ಎಂ.ದಿನೇಶ್ ಕುಮಾರ್, ಡಾ.ಕುಶಾಲಪ್ಪ, ಡಾ.ಮಂಜಪ್ಪ ಮುಂತಾದವರಿದ್ದರು.
    ಉತ್ತಮ ಸಾಧನೆ ತೋರಿಸ ಸಹಾಯಕ ಪ್ರಾಧ್ಯಾಪಕರಾದ ಡಾ.ಭೂಮಿಕಾ, ಡಾ.ಸುನೀಲ್, ವಿಜ್ಞಾನಿಗಳಾದ ಡಾ.ಪ್ರಕಾಶ್, ಡಾ.ಚೈತನ್ಯ, ಕ್ಷೇತ್ರ ಅಧೀಕ್ಷಕ ಬಸವರಾಜ ನಾಯ್ಕ ಅವರನ್ನು ಸನ್ಮಾನಿಸಲಾಯಿತು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts