More

    ಸೊಳ್ಳೆಗಳಿಂದ ಹರಡುವ ರೋಗ ಮಾರಣಾಂತಿಕ

    ಶಿವಮೊಗ್ಗ: ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿರ್ಲಕ್ಷಿಸಿದರೆ ಮಾರಣಾಂತಿಕವಾಗುವ ಅಪಾಯವಿದೆ. ಜ್ವರದ ಅನುಭವವಾದ ಕೂಡಲೇ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡದಪ್ಪ ಕಸಬಿ ತಿಳಿಸಿದರು.
    ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆಯಿಂದ ಮಾತ್ರ ಡೆಂೆ ಹಾಗೂ ಚಿಕೂನ್ ಗುನ್ಯ ಕಾಯಿಲೆಗಳ ನಿಯಂತ್ರಣ ಸಾಧ್ಯ ಎಂದು ಹೇಳಿದರು.
    ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರು ಸೊಳ್ಳೆಗಳಿಂದ ಹರಡುವ ಕಾಯಿಲೆಗಳಾದ ಮಲೇರಿಯ, ಡೆಂೆ, ಚಿಕೂನ್‌ಗುನ್ಯ, ಮೆದುಳು ಜ್ವರ ಹಾಗೂ ಆನೆಕಾಲು ರೋಗಕ್ಕೆ ಒಳಗಾಗುತ್ತಾರೆ. ಜಿಲ್ಲೆಯಲ್ಲಿ ಈ ವರ್ಷ 7 ಮಲೇರಿಯ, 121 ಡೆಂೆ ಪ್ರಕರಣಗಳು ವರದಿಯಾಗಿವೆ. ಜೂನ್‌ನಲ್ಲಿ 51 ಮಂದಿಯಲ್ಲಿ ಡೆಂೆ ಕಾಣಿಸಿಕೊಂಡಿತ್ತು ಎಂದು ವಿವರಿಸಿದರು.
    ಮನೆಯೊಳಗಿನ ನೀರು ಸಂಗ್ರಹ ಮಾಡುವ ಸಿಮೆಂಟ್ ತೊಟ್ಟಿ ಹಾಗೂ ಡ್ರಮ್‌ಗಳನ್ನು ವಾರಕ್ಕೊಮ್ಮೆ ತೊಳೆದು ಒಣಗಿಸಬೇಕು. ಅವುಗಳ ಮೇಲೆ ಸೊಳ್ಳೆಗಳು ಕೂರದಂತೆ ಮುಚ್ಚಿಡಬೇಕು. ನೀರಿನ ಸಂಗ್ರಹ ಮೂಲಗಳನ್ನು ವಾರದಲ್ಲಿ ಒಮ್ಮೆ ತಪ್ಪದೇ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕೆಂದು ತಿಳಿಸಿದರು.
    ಜಿಲ್ಲಾ ಲಸಿಕಾಧಿಕಾರಿ ಡಾ.ನಾಗರಾಜ್ ನಾಯ್ಕ ಮಾತನಾಡಿ, ಸೊಳ್ಳೆಗಳಿಂದ ಹರಡುವ ಕಾಯಿಲೆಗಳಿಂದ ಮುಕ್ತಿ ಪಡೆಯಲು ಪ್ರತಿಯೊಬ್ಬರೂ ವೈಯಕ್ತಿಕ ಸುರಕ್ಷತೆಗಾಗಿ ಸೊಳ್ಳೆ ಪರದೆ ಉಪಯೋಗಿಸಬೇಕೆಂದರು.
    ಬೆಂಗಳೂರು ಪ್ರಯೋಗಶಾಲೆಯ ಹಿರಿಯ ತಜ್ಞೆ ಇಂದಿರಾ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಸಿಬ್ಬಂದಿ ಉಮೇಶ್, ಶಶಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts