More

    ನಿಸ್ವಾರ್ಥ ಸೇವೆಯಿಂದ ಆತ್ಮ ತೃಪ್ತಿ:ಡಾ.ಸರ್ಜಿ ಅಭಿಮತ

    ಶಿವಮೊಗ್ಗ: ಎಲ್ಲರೂ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಿಸ್ವಾರ್ಥ ಸೇವೆಯಿಂದ ಆತ್ಮ ತೃಪ್ತಿ ಲಭಿಸುತ್ತದೆ ಎಂದು ಸರ್ಜಿ ಫೌಂಡೇಷನ್ ಅಧ್ಯಕ್ಷ ಡಾ.ಧನಜಂಯ ಸರ್ಜಿ ಅಭಿಪ್ರಾಯಪಟ್ಟರು.
    ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಏರ್ಪಡಿಸಿದ್ದ ಸಹ್ಯಾದ್ರಿ ಉತ್ಸವ ಹಾಗೂ ಜೆಸಿ ಸಪ್ತಾಹದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸೇವಾ ಮನೋಭಾವ ವೃದ್ಧಿಯಾಗುತ್ತದೆ. ಅನ್ನದಾನ, ವಿದ್ಯಾದಾನ, ರಕ್ತದಾನ ಪ್ರಮುಖ ಸೇವಾ ಕಾರ್ಯಗಳೆಂದು ಪರಿಗಣಿಸಲ್ಪಟ್ಟಿವೆ ಎಂದರು.
    ಜೆಸಿಐನಂತಹ ಸಂಸ್ಥೆಗಳಲ್ಲಿ ತೊಡಗುವುದರಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಆತ್ಮಸ್ಥೈರ್ಯ, ಸೇವಾ ಮನೋಭಾವ ಹೆಚ್ಚುತ್ತದೆ. ಕಷ್ಟ ಎದುರಾದಾಗ ಅದನ್ನು ಧೈರ್ಯದಿಂದ ಎದುರಿಸಬೇಕು. ಕಠಿಣ ಪರಿಸ್ಥಿತಿಯ ಬಳಿಕವೇ ಯಶಸ್ಸು ಸಿಗಲು ಸಾಧ್ಯ ಎಂದು ಹೇಳಿದರು.
    ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾವಂತ ಯುವ ಸಮುದಾಯ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಬೇಕು. ಸಾರ್ವಜನಿಕ ಸೇವೆ ಸಲ್ಲಿಸಲು ಅವಕಾಶ ಇರುವ ರಾಜಕೀಯ ಕ್ಷೇತ್ರಕ್ಕೆ ವಿದ್ಯಾವಂತ ಯುವ ಸಮುದಾಯ ಬರುವುದರ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಯ ಭಾಗವಾಗಬೇಕು ಎಂದು ಹೇಳಿದರು.
    ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪವಿತ್ರ ಕುಮಾರ, ಕಿಶೋರ್ ಕುಮಾರ್, ಪ್ರಕಾಶ್ ಬೈಂದೂರ್, ಕೆ.ಕಿರಣ್ ಅವರನ್ನು ಸನ್ಮಾನಿಸಲಾಯಿತು. ಮಯೂರಿ ನೃತ್ಯ ಕಲಾ ಕೇಂದ್ರ ವಿದುಷಿ ಶ್ವೇತಾ ಪ್ರಕಾಶ್ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಚಿಕ್ಕಮಗಳೂರಿನ ಕಾಫಿನಾಡು ಚಂದು ಕಾರ್ಯಕ್ರಮ ಉದ್ಘಾಟಿಸಿದರು.
    ಜೆಸಿಐ ವಲಯ ನಿರ್ದೇಶಕ ಅನೂಶ್ ಗೌಡ, ಸಮನ್ವಯಾಧಿಕಾರಿ ಚಂದ್ರಹಾಸ ಶೆಟ್ಟಿ, ಮಾಜಿ ಸಹಾಯಕ ಗೌರ‌್ನರ್ ಜಿ.ವಿಜಯ್ ಕುಮಾರ್, ಸಹ್ಯಾದ್ರಿ ಜೇಸಿ ಸಂಸ್ಥಾಪಕ ಅಧ್ಯಕ್ಷ ಹರೀಶ್, ಕಾರ್ಯದರ್ಶಿ ಬಿ.ಎನ್.ಸಂತೋಷ್‌ಕುಮಾರ್, ಕಾರ್ಯಕ್ರಮ ನಿರ್ದೇಶಕಿ ಡಾ.ಡಿ.ಅಖಿಲಾ ಮುಂತಾದವರಿದ್ದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts