More

    ಸಂವಿಧಾನ ಪೀಠಿಕೆಯ ಆಶಯ ಈಡೇರಿಸೋಣ

    ಶಿವಮೊಗ್ಗ: ನಮ್ಮೆಲ್ಲರ ವರ್ತನೆ ಸಂವಿಧಾನದ ಪೀಠಿಕೆಯ ಆಶಯವನ್ನು ಈಡೇರಿಸುವಂತಿರಬೇಕು. ಆಗ ಮಾತ್ರ ಸಂವಿಧಾನ ರಚನೆಯ ಮೂಲ ಉದ್ಧೇಶ ಸಾಕಾರಗೊಳ್ಳುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅಭಿಪ್ರಾಯಪಟ್ಟರು.
    ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳ ಅರೆಕಾಲಿಕ ಸ್ವಯಂ ಸೇವಕರಿಗೆ ಏರ್ಪಡಿಸಿದ್ದ ಅಭಿಶಿಕ್ಷಣ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನಿನ ಎದುರು ಎಲ್ಲರೂ ಸಮಾನರು. ಎಲ್ಲರಿಗೂ ನೆರವು ನೀಡಲು ಕಾನೂನು ಸೇವೆಗಳ ಪ್ರಾಧಿಕಾರಗಳ ಸ್ಥಾಪನೆಯಾಗಿದೆ ಎಂದರು.
    ಸಮಾಜದಲ್ಲಿದ್ದ ಅಸಮಾನತೆ ಹೋಗಲಾಡಿಸಲು ಬಸವಣ್ಣ ಅನುಭವ ಮಂಟಪ ಸ್ಥಾಪಿಸಿದ್ದರು. ಅದೇ ರೀತಿ ಸಮಾನತೆಯ ಉದ್ದೇಶದಿಂದ ಡಾ.ಬಿ.ಆರ್.ಅಂಬೇಡ್ಕರ್ ಸಾಕಷ್ಟು ಅಧ್ಯಯನ ಮಾಡಿ ಸಂವಿಧಾನ ರಚಿಸಿದರು. ಅದರ ಪೀಠಿಕೆ ಸಂವಿಧಾನದ ಧ್ಯೇಯೋದ್ದೇಶ ಮತ್ತು ಆಶೋತ್ತರಗಳನ್ನು ಸವಿಸ್ತಾರವಾಗಿ ತಿಳಿಸುತ್ತದೆ. ಈ ಪೀಠಿಕೆಯಂತೆ ನಾವೆಲ್ಲ ನಡೆದುಕೊಳ್ಳಬೇಕು ಎಂದು ಹೇಳಿದರು.
    ಪ್ರಾಚಾರ್ಯ ಡಾ.ಪ್ರೊ.ಜಿ.ಆರ್.ಜಗದೀಶ್, ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ದಿ ಮತ್ತು ಸಮಾಜ ಪರಿವರ್ತನಾ ಟ್ರಸ್ಟ್‌ನ ನಿರ್ದೇಶಕ, ಕೆ.ಸಿ ಬಸವರಾಜಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts