More

    ಡಿಸೆಂಬರ್ 19ಕ್ಕೆ ಬೃಹತ್ ಲೋಕ್ ಅದಾಲತ್ : ನ್ಯಾಯಾಧೀಶ ಜಯಂತ್ ಕುಮಾರ್

    ಶಿವಮೊಗ್ಗ: ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಕಕ್ಷಿದಾರರ ಅನುಕೂಲಕ್ಕಾಗಿ ರಾಜಿ ಸಂಧಾನ ಮಾಡಿಕೊಳ್ಳಬಹುದಾದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನೂ ಒಳಗೊಂಡಂತೆ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಡಿಸೆಂಬರ್ 19ರಂದು ಜಿಲ್ಲೆಯಲ್ಲೂ ಬೃಹತ್ ಲೋಕ್ ಅದಾಲತ್ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಪ್ರಭಾರ ನ್ಯಾಯಾಧೀಶ ಬಿ.ಜಯಂತ್‌ಕುಮಾರ್ ತಿಳಿಸಿದರು.

    ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್, ಕ್ರಿಮಿನಲ್ ಹಾಗೂ ಇತರೆ ಪ್ರಕರಣಗಳನ್ನು ಇತ್ಯರ್ಥಕ್ಕೆ ಅದಾಲತ್ ನಡೆಸಲಾಗುತ್ತಿದೆ. ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆ ಪ್ರಕಾರವೇ ರಾಜೀ ಸಂಧಾನ ಮಾಡಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಬ್ಯಾಂಕ್‌ಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ, ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ ಇತರೆ ಯಾವುದೇ ನ್ಯಾಯಾಲಯಕ್ಕೆ ಬರಬಹುದಾದ ಪ್ರಕರಣಗಳನ್ನೂ ಪೂರ್ವ ವ್ಯಾಜ್ಯಗಳೆಂದು ಪರಿಗಣಿಸಿ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ರಾಜೀ ಸಂಧಾನ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು, ಅವರ ಅಮೂಲ್ಯ ಸಮಯ ಉಳಿತಾಯವಾಗಲಿದೆ. ಅಲ್ಲದೆ ಶೀಘ್ರವೇ ನ್ಯಾಯದಾನವಾಗುತ್ತದೆ ಎಂದರು.

    1,119 ರಾಜೀ ಪ್ರಕರಣ ಗುರುತು: ನ.1ರವರೆಗೆ ಕಾರ್ಮಿಕರ ವಿವಾದ, ಭೂ ವಿವಾದ, ಮ್ಯಾಟ್ರೋಮನಿ, ಚೆಕ್‌ಬೌನ್ಸ್, ಹೊಡೆದಾಟ, ವಾಹನಗಳ ಅಪರಾಧ, ವಿಚ್ಚೇಧನ ಸೇರಿ 50,222 ಪ್ರಕರಣಗಳಿದ್ದು, ಅವುಗಳಲ್ಲಿ 25,777 ಪ್ರಕರಣಗಳನ್ನು ಗುರುತಿಸಲಾಗಿದೆ. ನ.7ರವರೆಗೆ ಜಿಲ್ಲೆ ಎಲ್ಲ ನ್ಯಾಯಾಲಯಗಳಿಂದ 1,119 ಪ್ರಕರಣಗಳನ್ನು ಅದಾಲತ್‌ಗಾಗಿ ಗುರುತಿಸಲಾಗಿದೆ. ಈಗಾಗಲೇ ರಾಜೀ ಸಂಧಾನಕ್ಕೆ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts