More

    ಮೇಯರ್-ಉಪಮೆಯರ್ ಚುನಾವಣೆ ಸೆ.13ಕ್ಕೆ

    ಶಿವಮೊಗ್ಗ: ನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಸೆ.13ರಂದು ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧಿಸೂಚನೆ ಪ್ರಕಟಿಸಿದ್ದಾರೆ.
    ಸೆ.13ರ ಮಧ್ಯಾಹ್ನ 12 ರಿಂದ 1ರವರೆಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ನಾಮಪತ್ರಗಳ ಪರಿಶೀಲನೆ ಹಿಂಪಡೆಯಲು ಸಮಯ ನಿಗದಿಯಾಗಿದ್ದು, ಮಧ್ಯಾಹ್ನ 3ಕ್ಕೆ ಸಭೆ ನಡೆಸಲಾಗುವುದು. ಮೇಯರ್, ಉಪಮೇಯರ್ ಆಯ್ಕೆ ಅವಿರೋಧವಾಗಿ ನಡೆದರೆ ಫಲಿತಾಂಶ ಘೋಷಣೆ ಮಾಡಲಾಗುತ್ತದೆ. ಅಗತ್ಯ ಬಿದ್ದರೆ ಕೈ ಎತ್ತುವ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಗುವುದು.
    ನಗರ ಪಾಲಿಕೆಯ ನಾಲ್ಕನೇ ಅವಧಿಗೆ ಮೇಯರ್, ಉಪಮೇಯರ್ ಚುನಾವಣೆಗೆ ಆ.24ರಂದು ಸರ್ಕಾರ ಮೀಸಲಾತಿ ನಿಗದಿಪಡಿಸಿತ್ತು. ಮೇಯರ್ ಸ್ಥಾನ ಬಿಸಿಎಂಎ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
    ನಗರ ಪಾಲಿಕೆಯಲ್ಲಿ ಸಂಪೂರ್ಣ ಬಹುಮತ ಹೊಂದಿರುವ ಬಿಜೆಪಿ ಮೇಯರ್ ಸ್ಥಾನಕ್ಕೆ ಎಸ್.ಜ್ಞಾನೇಶ್ವರ್ ಅವರನ್ನು ಕಣಕ್ಕಿಳಿಸುವುದು ಬಹುತೇಕ ನಿಶ್ಚಿತವಾಗಿದೆ. ಉಪಮೇಯರ್ ಸ್ಥಾನಕ್ಕೆ ಹಿರಿಯ ಸದಸ್ಯೆ ಲಕ್ಷ್ಮೀ ಶಂಕರನಾಯ್ಕ ಹಾಗೂ ಈ ಹಿಂದೆ ಮೇಯರ್ ಸ್ಥಾನಕ್ಕೆ ತೀವ್ರ ಪ್ರಯತ್ನಿಸಿದ್ದ ಅನಿತಾ ರವಿಶಂಕರ್ ನಡುವೆ ಪೈಪೋಟಿಯಿದೆ.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts