More

    ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ: ಗೋವಿಂದ ನಾಯ್ಕ ಕಳವಳ

    ಶಿವಮೊಗ್ಗ: ಅರಣ್ಯ ಪ್ರದೇಶದ ನಿರ್ಬಂಧಿತ ವ್ಯಾಪ್ತಿಯಲ್ಲಿ ರೆಸಾರ್ಟ್, ಹೋಟೆಲ್‌ಗಳು ಆರಂಭವಾಗುತ್ತಿರುವ ಬಗ್ಗೆ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ಜಟ್ಟಪ್ಪ ನಾಯ್ಕ ತೀವ್ರ ಕಳವಳ ವ್ಯಕ್ತಪಡಿಸಿದರು. ಅಭಿವೃದ್ಧಿ ಹೆಸರಿನಲ್ಲಿ ಪರಿಸರದ ಮೇಲೆ ಪ್ರಹಾರ ಮಾಡಲಾಗುತ್ತಿದೆ. ಹೊಸನಗರ ತಾಲೂಕಿನ ಕುಂಭತ್ತಿ, ಸಾಗರ ತಾಲೂಕಿನ ವಿವಿಧೆಡೆ ನಡೆಯುತ್ತಿರುವ ಜಂಬಿಟ್ಟಿಗೆ ಕ್ವಾರಿಗಳು ಪರಿಸರಕ್ಕೆ ತೀವ್ರ ಹಾನಿ ಮಾಡಬಲ್ಲವಾಗಿವೆ ಎಂದು ಹೇಳಿದರು.
    ಸೋಮವಾರ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಜಂಬಿಟ್ಟಿಗೆ ಕ್ವಾರಿ ನಡೆಸುತ್ತಿರುವವರ ವಿರುದ್ಧ ದೂರು ದಾಖಲಿಸಿ, ಪರವಾನಗಿ ರದ್ದುಪಡಿಸುವಂತೆ ಸೂಚಿಸಿದರು.
    ಪ್ರವಾಸೋದ್ಯಮದ ನೆಪದಲ್ಲಿ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಜಿಲ್ಲೆಯ ವಿವಿಧೆಡೆ ಹೋಟೆಲ್, ರೆಸಾರ್ಟ್‌ಗಳನ್ನು ಆರಂಭಿಸಲಾಗಿದೆ. ತುಂಗಾ ನದಿಗೆ ಕಲುಷಿತ ನೀರು ಸೇರುತ್ತಿದೆ. ಈ ಸಮಸ್ಯೆಗಳ ಬಗ್ಗೆ ಸಮಗ್ರ ವರದಿ ಪಡೆದು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
    ತಲೆ ಎತ್ತುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದ ಅವರು, ಈ ಸಂಬಂಧ ಸಮಗ್ರ ಮಾಹಿತಿ ಸಂಗ್ರಹಿಸಿ ಕ್ರಮಕ್ಕೆ ಸೂಚಿಸಲಾಗುವುದು. ತುಂಗಾ ನದಿಗೆ ನಗರದ ಕಲುಶಿತ ನೀರು ಸೇರುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ನಿಯಂತ್ರಣ ಕ್ರಮ ಕೈಗೊಳ್ಳಲಾಗುವುದು ಎಂದರು.
    ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ವಿಜ್ಞಾನಿ ವಿಂದ್ಯಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕೆ.ಅಜ್ಜಪ್ಪ, ಪರಿಸರ ನಿಯಂತ್ರಣಾಧಿಕಾರಿ ಶಿಲ್ಪಾ, ಸೂಡಾ ಆಯುಕ್ತ ಕೊಟ್ರೇಶ್, ಡಿಎ್ಒ ಶಿವಶಂಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts