More

    ಪಡಿತರ ಅಕ್ರಮ ವಿರೋಧಿಸಿ ಪ್ರತಿಭಟನೆ

    ಶಿವಮೊಗ್ಗ:ಭದ್ರಾವತಿ ತಾಲೂಕಿನಲ್ಲಿ ಅಕ್ರಮ ಎಸಗಿರುವ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಿ, ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜೆಡಿಯು ಹಾಗೂ ಕೆಆರ್‌ಎಸ್ ಕಾರ್ಯಕರ್ತರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಇಲಾಖೆ ಅಧಿಕಾರಿಗಳೇ ಸಾಥ್ ನೀಡುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಬಡವರಿಗೆ ನ್ಯಾಯಯುತವಾಗಿ ಸಿಗಬೇಕಾದ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಲವು ನ್ಯಾಯಬೆಲೆ ಅಂಗಡಿಗಳ ಪರವಾನಗಿ ನವೀಕರಣವೇ ಆಗಿಲ್ಲ. ಆದರು ಪಡಿತರ ಮಾರಾಟಕ್ಕೆ ಅವಕಾಶ ನೀಡಿರುವುದು ಅಶ್ಚರ್ಯ ಮೂಡಿಸಿದೆ ಎಂದರು.
    ಕೆಲವು ಪಡಿತರ ಅಂಗಡಿಗಳಲ್ಲಿ ತೂಕದಲ್ಲೇ ವಂಚನೆ ಎಸಗಲಾಗುತ್ತಿದೆ. ಆಹಾರ ಇಲಾಖೆ ನಿಯಮಾವಳಿ ಪ್ರಕಾರ ಗೋದಾಮುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಆದರೆ ಸಿಸಿ ಕ್ಯಾಮರಾಗಳೇ ಇರುವುದಿಲ್ಲ. ನಕಲಿ ಪಡಿತರ ಕಾರ್ಡ್ ಸೃಷ್ಟಿಸಿ ವಂಚನೆ ಮಾಡಲಾಗುತ್ತಿದೆ. ಆದರೂ ಅಧಿಕಾರಿಗಳು ಸುಮ್ಮನಿದ್ದಾರೆ ಎಂದು ಆರೋಪಿಸಿದರು.
    ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಭದ್ರಾವತಿ ತಾಲೂಕು ಅಧ್ಯಕ್ಷ ಬಿ.ಎನ್. ರಾಜು, ಕೆಆರ್‌ಎಸ್ ಜಿಲ್ಲಾ ಸಂಚಾಲಕ ಅರುಣ್ ಕಾನಹಳ್ಳಿ, ಪ್ರಮುಖರಾದ ಪ್ರಭು, ಕೆ.ರವಿ, ಬಸವರಾಜ್, ಶಿವಸ್ವಾಮಿ ಭೂಪಾಳಂ ಮುಂತಾದವರು ಪ್ರತಿಭಟನೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts