Tuesday, 13th November 2018  

Vijayavani

ಲೋಕ ಎಲೆಕ್ಷನ್​​ ಗೆಲುವಿಗೆ ಮೈತ್ರಿಕೂಟ ಪ್ಲ್ಯಾನ್-ಮುಂದಿನ ವರ್ಷ ಟಿಪ್ಪು ಜಯಂತಿಗೆ ಬ್ರೇಕ್​        ಪಂಚಭೂತಗಳಲ್ಲಿ ಅನಂತ ಲೀನ-ಚಾಮರಾಜಪೇಟೆ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ        ಮೊಳಗಿದ ಅನಂತ್ ಅಮರ್​ ರಹೇ ಉದ್ಘೋಷ- ಅಗಲಿದ ಕಮಲಾಧಿಪತಿಗೆ ಅಡ್ವಾಣಿ, ಶಾ ಅಂತಿಮ ನಮನ        ರೆಡ್ಡಿ ಕೇಸ್​ನಲ್ಲಿ ಸಿಸಿಬಿಗೆ ಕೋರ್ಟ್​ ತರಾಟೆ- ರೆಡ್ಡಿಯನ್ನ ಬಂಧಿಸಿದ್ದೇಕೆ ಎಂದು ಪ್ರಶ್ನೆ-ಆದೇಶ ನಾಳೆಗೆ ಕಾಯ್ದಿಟ್ಟ ನ್ಯಾಯಾಲಯ        ರಫೇಲ್ ಡೀಲ್​​ನಲ್ಲಿ ರಿಲಯನ್ಸ್ ಆಯ್ಕೆ ನಮ್ಮದು- ಡಸಾಲ್ಟ್ ಸಿಇಓ ಸ್ಪಷ್ಟನೆ- ಎರಿಕ್ ಮಾತು ಸುಳ್ಳೆಂದ ಕಾಂಗ್ರೆಸ್ ಮತ್ತೆ ಹಳೇರಾಗ.!        ಮಹಾಘಟಬಂಧನ್​ ವಿರುದ್ಧ ತಲೈವಾ ಘರ್ಜನೆ- ಮೋದಿ ಪರ ಡೈಲಾಗ್​​ಗೆ ರಜನಿ ಸಮರ್ಥನೆ-ಬಿಜೆಪಿ ಕಡೆ ವಾಲುತ್ತಾರಾ ತಲೈವಾ?       
Breaking News

ಕೊನೆಯುಸಿರೆಳೆದ ದರ್ಶನ್ ಅಭಿಮಾನಿ ರೇವಂತ್‌

Saturday, 10.02.2018, 8:07 PM       No Comments

ಶಿವಮೊಗ್ಗ: ನಿನ್ನೆ ಶುಕ್ರವಾರವಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ವಿಡಿಯೋಕಾಲ್​ನಲ್ಲಿ ಮಾತನಾಡಿದ್ದ ಶಿವಮೊಗ್ಗದ ರೇವಂತ್ ಶನಿವಾರ ಸಂಜೆ ಮೃತಪಟ್ಟಿದ್ದಾರೆ.

ಮೂಳೆ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ವಿಷಯ ತಿಳಿದಿರಲಿಲ್ಲ. ವೈದ್ಯರ ಸಲಹೆ ಮೇರೆಗೆ ಕಾಲು ನೋವಿಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ರೇವಂತ್​ಗೆ ತಿಳಿಸಲಾಗಿತ್ತು. ರೇವಂತ್​ನೊಂದಿಗೆ ವಿಡಿಯೋಕಾಲ್​ನಲ್ಲಿ ಮಾತನಾಡುವಾಗ ಆತನಿಗೆ ಕ್ಯಾನ್ಸರ್ ಇರುವ ವಿಷಯ ತಿಳಿಸಬೇಡಿ ಎಂದು ದರ್ಶನ್​ಗೆ ಮುಂಚಿತವಾಗಿಯೇ ಮನವಿ ಮಾಡಲಾಗಿತ್ತು.

ದರ್ಶನ್ ಅಭಿಮಾನಿ ರೇವಂತ್ ಪ್ರತಿ ವರ್ಷ ದರ್ಶನ್ ಜನ್ಮದಿನದಂದು ಬೆಂಗಳೂರಿಗೆ ತೆರಳಿ ಶುಭಾಶಯ ಕೋರುತ್ತಿದ್ದರು. ಈ ವರ್ಷ ಫೆ. 16ರಂದು ನೆಚ್ಚಿನ ನಟನಿಗೆ ಜನ್ಮ ದಿನದ ಶುಭಾಶಯ ಕೋರಲು ಬೆಂಗಳೂರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂಬ ಚಿಂತೆಯಲ್ಲಿದ್ದರು.

ವಿಷಯ ತಿಳಿದ ದರ್ಶನ್ ಶುಕ್ರವಾರ ಸ್ನೇಹಿತರ ಮೊಬೈಲ್​ಗೆ ವಿಡಿಯೋ ಕಾಲ್ ಮಾಡಿ ರೇವಂತ್ ಮತ್ತು ಆತನ ತಾಯಿಯೊಂದಿಗೆ ಮಾತನಾಡಿ ಧೈರ್ಯ ತುಂಬಿದ್ದರು. ಶೀಘ್ರದಲ್ಲೇ ಶಿವಮೊಗ್ಗಕ್ಕೆ ಬಂದು ಭೇಟಿ ಮಾಡುತ್ತೇನೆ ಎಂದು ಹೇಳಿದ್ದರು.

ಐಟಿಐ ಮುಗಿಸಿದ ನಂತರ ಕೆಲಸಕ್ಕೆಂದು ಬೆಂಗಳೂರಿಗೆ ತೆರಳಿದ್ದ ರೇವಂತ್, ಕಾಲು ನೋವು ಎಂದು ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು. ವೈದ್ಯರ ಬಳಿ ಹೋದಾಗ ಮೂಳೆ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು.

Leave a Reply

Your email address will not be published. Required fields are marked *

Back To Top