More

    ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಪ್ರತಿಭಟನೆ

    ಶಿವಮೊಗ್ಗ: ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿರುದ್ಧ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರತಿಭಟನೆಗಳ ಸರಣಿ ಮುಂದುವರಿದಿದೆ. ಗುರುವಾರ ವಿನೋಬ ನಗರ ಪೊಲೀಸ್ ಚೌಕಿಯಲ್ಲಿ ಪ್ರತಿಭಟನೆ ನಡೆಸಿದ ಒಕ್ಕೂಟದ ಪ್ರಮುಖರು ಸ್ಮಾರ್ಟ್ ಕಾಮಗಾರಿಗಳು ಕಳಪೆಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    15 ವರ್ಷ ಉತ್ತಮವಾಗಿರಬೇಕಿದ್ದ ರಸ್ತೆಗಳಲ್ಲಿ ಎರಡು ತಿಂಗಳಿಗೆ ಗುಂಡಿ ನಿರ್ಮಾಣವಾಗಿದೆ. ಇನ್ನೊಂದು ವರ್ಷದಲ್ಲಿ ಈ ರಸ್ತೆಗಳು ಸಂಪೂರ್ಣ ಹಾಳಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು. ಬಾಕ್ಸ್ ಚರಂಡಿ ಮೇಲೆ ಅವೈಜ್ಞಾನಿಕವಾಗಿ ಕಲ್ಲುಗಳನ್ನು ಜೋಡಿಸಲಾಗಿದೆ. ಪಾದಚಾರಿ ಮಾರ್ಗದಲ್ಲೂ ಗುಂಡಿಗಳಾಗಿವೆ ಎಂದು ದೂರಿದರು.
    ಕಳಪೆ ಕಾಮಗಾರಿಯಿಂದ ಕೋಟ್ಯಂತರ ರೂ. ಮೌಲ್ಯದ ಮರಳು, ಕಲ್ಲು ನಷ್ಟವಾಗಿದೆ. ಅನುದಾನ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜನರ ತೆರಿಗೆ ಹಣ ವೃಥಾ ಪೋಲಾಗುತ್ತಿದೆ. ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ ವಿರುದ್ಧ ಘೋಷಣೆ ಕೂಗಿದರು.
    ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಧಾನ ಕಾರ್ಯದಶಿ ಕೆ.ವಿ. ವಸಂತಕುಮಾರ್, ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಚ್.ಆರ್.ಭಾಸ್ಕರ್, ಡಾ.ಶೇಖರ್ ಗೌಳೇರ್, ನಾಗರಾಜ್ ಶೆಟ್ಟರ್, ಎಚ್.ಪಿ.ಸೀತಾರಾಂ ಮುಂತಾದವರು ಪ್ರತಿಭಟನೆಯಲ್ಲಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts