More

    ವಿಪ್ರ ಸಾಧಕರಿಗೆ ವಿಪ್ರಶ್ರೀ ಗೌರವ

    ಶಿವಮೊಗ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಟನೆಗಳ ಆಶ್ರಯದಲ್ಲಿ ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆ.27ರ ಸಂಜೆ 4.30ಕ್ಕೆ ವಿಪ್ರ ಸಮಾಜದ ಸಾಧಕರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ಮಹಾಸಭಾದ ಜಿಲ್ಲಾಧ್ಯಕ್ಷ ಕೆ.ಸಿ.ನಟರಾಜ್ ಭಾಗವತ್ ತಿಳಿಸಿದರು.
    ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    27ರ ಬೆಳಗ್ಗೆ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಮೂರನೇ ಕಾರ್ಯಕಾರಿಣಿ ಸಭೆ ನಡೆಯಲಿದೆ. ಸಭೆಯಲ್ಲಿ ಸಮಾಜದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.
    ಬ್ರಾಹ್ಮಣ ಮಹಾಸಭಾದಲ್ಲಿ ಸುಮಾರು 52 ಸಾವಿರ ಸದಸ್ಯರಿದ್ದಾರೆ. ಸದಸ್ಯತ್ವ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಸುಮಾರು 3,800 ಸದಸ್ಯರಿದ್ದಾರೆ. ಕೆಲವರು ಬ್ರಾಹ್ಮಣ ಮಹಾಸಭಾದ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.
    ಈ ಹಿಂದಿನ ಬ್ರಾಹ್ಮಣ ಸಭಾ ಕಾರ್ಯಕಾರಿಣಿಯಲ್ಲಿ ವ್ಯಕ್ತವಾಗಿದ್ದ ಅಭಿಪ್ರಾಯಗಳನ್ನು ಅಧರಿಸಿ ಹಲವಾರು ರಚನಾತ್ಮಕ ಕಾರ್ಯಗಳನ್ನು ಮಾಡಲಾಗಿದೆ. ಸಮಾಜದ ಕಡೆಯ ವ್ಯಕ್ತಿಗೂ ಬ್ರಾಹ್ಮಣ ಮಹಾಸಭಾದ ಕಾರ್ಯಕ್ರಮ ತಲುಪಬೇಕೆಂಬ ಉದ್ಧೇಶದಿಂದ ಕಾರ್ಯನಿರ್ವಹಿಸಲಾಗುತ್ತಿದೆ. ಇದಕ್ಕಾಗಿ 18 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
    ಜಿಲ್ಲಾ ಬ್ರಾಹ್ಮಣ ಮಹಾಸಭಾದ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ನಿರ್ದೇಶಕರಾದ ಸುರೇಖಾ ಮುರಳೀಧರ್, ಶಂಕರನಾರಾಯಣ, ಸೂರ್ಯನಾರಾಯಣ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
    ಸೆ.27ರ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಲಿರುವವರು:
    ಅ.ಸುಂದರ-ಸಂಶೋಧಕರು, ಪ್ರಾಚ್ಯ ವಸ್ತುಶಾಸ್ತ್ರಜ್ಞ.
    ಭ.ಮ.ಶ್ರೀಕಂಠ-ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗಗುರು.
    ಅ.ಪ.ರಾಮಭಟ್ಟ-ಅರ್ಚಕರು, ಧಾರ್ಮಿಕ ಚಿಂತಕರು.
    ಡಾ.ಕೆ.ಸುರೇಶ್-ಆಯುರ್ವೇದ ವೈದ್ಯರು, ರೇಖಿ ಚಿಕಿತ್ಸಾ ತಜ್ಞ.
    ರಾಜಲಕ್ಷ್ಮೀ– ಸೌಂದರ್ಯ ಲಹರಿ ಪ್ರಶಿಕ್ಷಕರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts