

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಉಪನಿರ್ದೇಶಕರ ಕಚೇರಿಯ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ 14ರಿಂದ 17ರ ವಯೋಮಿತಿಯ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲ ವಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ಶೈನಿ ಡಿಸೋಜ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
200 ಮೀಟರ್ ಫ್ರೀ ಸ್ಟೈಲ್‌ನಲ್ಲಿ ಬೆಳ್ಳಿ ಪದಕ, 100 ಮೀ. ಫ್ರೀ ಸ್ಟೈಲ್ ಮತ್ತು 100 ಮೀ. ಬ್ಯಾಕ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ ಗೆದ್ದು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ.
ಒಂಬತ್ತನೇ ತರಗತಿಯ ಶಾನ್ ಡಿಸೋಜ 50 ಮೀ. ಫ್ರೀ ಸ್ಟೈಲ್ ಮತ್ತು 50 ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಕಂಚಿನ ಪದಕ, ಆರನೇ ತರಗತಿಯ ಸಿಯಾ ಜೋನ್ನಾ ಅಂಚನ್ 50 ಮೀ. ಫ್ರೀಸ್ಟೈಲ್‌ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.