More

    9ಕ್ಕೆ ಶಿರಾ ಉಪಚುನಾವಣೆ ಅಧಿಸೂಚನೆ: ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್

    ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಧಿಸೂಚನೆ ಅ.9ರಂದು ಹೊರಡಿಸಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಸಿದ್ಧತೆ ವಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್‌ಕುವಾರ್ ತಿಳಿಸಿದರು.

    ಭಾರತೀಯ ಚುನಾವಣಾ ಆಯೋಗ ಉಪಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಅ.16ರಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿದೆ, ಪರಿಶೀಲನೆಗೆ 17, ಹಿಂಪಡೆಯಲು 19 ಕೊನೇ ದಿನವಾಗಿರುತ್ತದೆ, ನ.3ರಂದು ಮತದಾನ ನಡೆಯಲಿದ್ದು, 10ರಂದು ಮತ ಎಣಿಕೆ ನಡೆಯಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಮಧುಗಿರಿ ಉಪವಿಭಾಗಾಧಿಕಾರಿ ಡಾ.ನಂದಿನಿದೇವಿ ಚುನಾವಣಾಧಿಕಾರಿಯಾಗಿ, ಶಿರಾ ತಹಸೀಲ್ದಾರ್ ನಾಹೀದಾ ಜಂ ಜಂ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಕರೊನಾ ಹಿನ್ನೆಲೆಯಲ್ಲಿ ಸಾವಿರ ಮತದಾರರಿಗೆ ಒಂದು ಮತಗಟ್ಟೆಯಂತೆ 330 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.

    1,10,265 ಪುರುಷರು, 1,05,419 ಮಹಿಳೆಯರು, ಇತರ 10 ಸೇರಿ ಒಟ್ಟು 2,15,694 ಮತದಾರದ್ದು, ಮತದಾನಕ್ಕೆ ಒಟ್ಟು 1584 ಸಿಬ್ಬಂದಿ ನೇಮಿಸಲಾಗುವುದು. ಮತದಾನದ ಮಸ್ಟರಿಂಗ್ ಹಾಗೂ ಡಿಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯ ಶಿರಾ ಪದವಿ ಕಾಲೇಜಿನಲ್ಲಿ ನಡೆಯುವ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅಲೋಕ್ ಕುವಾರ್ ದುಬೆ ಇದ್ದರು.

    ನೀತಿ ಸಂಹಿತೆ ಜಿಲ್ಲೆಗೆ ಅನ್ವಯ: ವಾದರಿ ನೀತಿ ಸಂಹಿತೆ ಚುನಾವಣಾ ಆಯೋಗ ವೇಳಾಪಟ್ಟಿ ೋಷಿಸಿದ ಕ್ಷಣದಿಂದಲೇ ಸಂಪೂರ್ಣ ಜಿಲ್ಲೆಗೆ ಅನ್ವಯಿಸಲಿದೆ. ಹೊಸ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲು ಅವಕಾಶವಿಲ್ಲ. ಈಗಾಗಲೇ ಕಾಮಗಾರಿಗಳು ಪ್ರಗತಿಯಲ್ಲಿದ್ದರೆ ಮುಂದುವರಿಸಬಹುದು ಎಂದು ರಾಕೇಶ್ ಕುಮಾರ್ ತಿಳಿಸಿದರು.

    ಪ್ಲೈಯಿಂಗ್ ಸ್ಕ್ವಾಡ್‌ಗಳ ರಚನೆ: ಆಂಧ್ರಪ್ರದೇಶದ ಗಡಿ ಹಾಗೂ ಜಿಲ್ಲೆಯ ಇನ್ನಿತರ ತಾಲೂಕು ಸಂಪರ್ಕಿಸುವ ರಸ್ತೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಿದ್ದು, ನೀತಿ ಸಂಹಿತೆ ಉಲ್ಲಂನೆಯಾಗದಂತೆ ಹಾಗೂ ಚುನಾವಣಾ ಅಕ್ರಮ ತಡೆಗಟ್ಟಲು ಸದ್ಯಕ್ಕೆ 4 ಪ್ಲೈಯಿಂಗ್ ಸ್ಕ್ವಾಡ್, 10 ಸ್ಥಳಗಳಲ್ಲಿ ಚೆಕ್‌ಪೋಸ್ಟ್ ತೆರೆಯಲಾಗುವುದು ಎಂದು ಡಿಸಿ ತಿಳಿಸಿದರು. ಸ್ಟಾಟಿಕ್ ಸರ್ವೆಲೇನ್ಸ್, ವೀಡಿಯೋ ಸರ್ವೆಲೆನ್ಸ್, ವೀಡಿಯೋ ವೀವಿಂಗ್ ಟೀಮ್ ತಂಡಗಳನ್ನು ರಚಿಸಲಾಗಿದೆ. ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಶಿರಾ ಹಾಗೂ ಅಕ್ಕಪಕ್ಕದ ತಾಲೂಕುಗಳಲ್ಲಿ ಮದ್ಯ ವಾರಾಟವಾಗಿರುವ ಬಗ್ಗೆ ವಾಹಿತಿ ಹಾಗೂ ಮದ್ಯದಂಗಡಿಗಳ ಮೇಲೆ ನಿಗಾ ಇಡುವಂತೆ ಸೂಚಿಸಲಾಗಿದೆ ಎಂದರು.

    ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ: ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ಮತಗಟ್ಟೆಗಳು, ಭದ್ರತಾ ಕೊಠಡಿ, ಆರ್‌ಒ ಕಚೇರಿಯನ್ನು ಸ್ಯಾನಿಟೈಸ್ ವಾಡಲಾಗುವುದು. 80 ವರ್ಷ ಮೇಲ್ಪಟ್ಟ ಮತದಾರರು, ಅಂಕವಿಕಲರು, ಕೋವಿಡ್ ಶಂಕಿತ ಅಥವಾ ಸೋಂಕಿತರು ಪೋಸ್ಟಲ್ ಬ್ಯಾಲೆಟ್ ಮೂಲಕ ಮತದಾನ ವಾಡಲು ಆಯೋಗ ಅವಕಾಶ ಕಲ್ಪಿಸಿದೆ. ನಮೂನೆ 12ಡಿ ನಲ್ಲಿ ಚುನಾವಣೆ ಅಧಿಸೂಚನೆ ಹೊರಡಿಸಿದ 5 ದಿನದೊಳಗೆ ಮನವಿ ಸಲ್ಲಿಸಿದರೆ ಪೋಸ್ಟಲ್ ಬ್ಯಾಲೆಟ್‌ನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ರಾಕೇಶ್‌ಕುವಾರ್ ತಿಳಿಸಿದ್ದಾರೆ. ಮತದಾರರು ಮತಗಟ್ಟೆಗೆ ಬರುವಾಗ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ, ಮತಗಟ್ಟೆ ಅಧಿಕಾರಿಗಳಿಗೆ ವಾಸ್ಕ್, ಸ್ಯಾನಿಟೈಸರ್ ಸೇರಿ ಸೋಂಕು ನಿಯಂತ್ರಣದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕ್ಷಯರೋಗಾಧಿಕಾರಿ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ನೋಡಲ್ ಅಧಿಕಾರಿಯಾಗಿ ಶಿರಾ ತಾಲೂಕು ಆರೋಗ್ಯ ಅಧಿಕಾರಿಯನ್ನು ನೇಮಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts