More

    ನರೇಗಾದಲ್ಲಿ ಮಹಿಳೆಯರು ಪಾಲ್ಗೊಳ್ಳಲಿ

    ಶಿರಹಟ್ಟಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಶೇ. 60ರಷ್ಟು ಮಹಿಳೆಯರ ಪಾಲ್ಗೊಳ್ಳುವಿಕೆ ಅಗತ್ಯ. ಆರ್ಥಿಕ ಸಬಲತೆಯ ಮಹತ್ವ ತಿಳಿಸಿ ಅವರಲ್ಲಿ ಅರಿವು ಮೂಡಿಸಲು ಪ್ರತಿ ಗ್ರಾಪಂ ಮಟ್ಟದಲ್ಲಿ ಮಹಿಳಾ ಕಾಯಕೋತ್ಸವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯಕ್ರಮ ಸಂಯೋಜಕ (ಡಿಐಇಸಿ) ವೀರಭದ್ರಪ್ಪ ಸಜ್ಜನ ಹೇಳಿದರು.
    ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ, ಜಿಪಂ, ತಾಪಂ ಸಹಯೋಗದಲ್ಲಿ ತಾಲೂಕಿನ ಮಜ್ಜೂರ ಗ್ರಾಪಂನಲ್ಲಿ ಆಯೋಜಿಸಿದ್ದ ಮಹಿಳಾ ಕಾಯಕೋತ್ಸವ ಅಭಿಯಾನದಲ್ಲಿ ಅವರು ಮಾತನಾಡಿದರು.
    ಗ್ರಾಮೀಣ ಪ್ರದೇಶದ ಜನತೆ ಯಾವುದೇ ಕಾರಣಕ್ಕೂ ಉದ್ಯೋಗ ಅರಸಿಕೊಂಡು ಗುಳೆ ಹೋಗದಂತೆ ತಡೆಯಲು ಸರ್ಕಾರ ನರೇಗಾ ಯೋಜನೆ ಜಾರಿಗೆ ತಂದಿದೆ. ದುಡಿಯುವ ಕಾರ್ಮಿಕರಿಗೆ ನಿಗದಿತ ಕೂಲಿ ಸಂದಾಯ ಮಾಡುವ ಮೂಲಕ ಕುಟುಂಬ ನಿರ್ವಹಣೆಗೆ ಅನುಕೂಲ ಮಾಡಿಕೊಟ್ಟಿದೆ ಎಂದರು.
    ತಾಲೂಕು ಇಐಸಿ ಮಂಜುನಾ ಥಸ್ವಾಮಿ, ಪಿಡಿಒ ವೀರಣ್ಣ ವಡ್ಡರ ಮಾತನಾಡಿ, ಮಹಿಳಾ ಕಾಯಕೋತ್ಸವ ಅಭಿಯಾನ ಕಾರ್ಯಕ್ರಮದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರನ್ನು ನರೇಗಾ ಕೆಲಸಗಳಲ್ಲಿ ತೊಡಗಿಸಿ ಆರ್ಥಿಕ ಸಬಲೀಕರಣ ಸಾಧಿಸುವ ಉದ್ದೇಶ ಹೊಂದಲಾಗಿದೆ ಎಂದರು. ಗ್ರಾಪಂ ಅಧ್ಯಕ್ಷ ಪ್ರಭು ಲಮಾಣಿ, ತಾಲೂಕು ಸಂಯೋಜಕ ಮಾರುತಿ ಕೊಡ್ಲಿ, ಅರುಣಕುಮಾರ ಹಿರೇಮಠ, ಬಿ. ಈಶ್ವರ, ಲಕ್ಷ್ಮೀ ಭಂಡಾರಿ, ಮಹಿಳಾ ಸಂಘದ ಸದಸ್ಯರು, ಗ್ರಾಪಂ ಸದಸ್ಯರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts