18.5 C
Bangalore
Monday, December 16, 2019

ಶಿರೂರು ಮಠಕ್ಕೆ ಶತಮಾನದ ಗತವೈಭವ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

< 25 ಲಕ್ಷ ರೂ. ವೆಚ್ಚದಲ್ಲಿ ನವೀಕರಣ ಮಾಡಿ ಕಾಯಕಲ್ಪ * ಸೋದೆ ಶ್ರೀ ಯೋಜನೆ>

ಉಡುಪಿ: ಹಿರಿಯಡ್ಕ ಸಮೀಪದ ಶಿರೂರು ಮೂಲ ಮಠದಲ್ಲಿ ಏ.12ರಿಂದ 19ರವರೆಗೆ ರಾಮನವಮಿ ಮತ್ತು ಹನುಮಜ್ಜಯಂತಿ ಉತ್ಸವ ನಡೆಯಲಿದ್ದು, ಮಠವನ್ನು 25 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಗಿದೆ. ಹೀಗಾಗಿ ಶತಮಾನದ ಗತವೈಭವ ಮತ್ತೆ ಮರುಕಳಿಸಿದೆ.

ಕಳೆದ ವರ್ಷ ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿರ್ಯಾಣ ಹೊಂದಿದ ಬಳಿಕ ದ್ವಂದ್ವ ಮಠವಾದ ಸೋದೆ ಮಠ ಶಿರೂರು ಮಠದ ಆಡಳಿತ ವಹಿಸಿಕೊಂಡಿತ್ತು. ಜೀರ್ಣಾವಸ್ಥೆಯಲ್ಲಿದ್ದ ಶಿರೂರು ಮಠಕ್ಕೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹಂತ ಹಂತವಾಗಿ ನವೀಕರಣ ಕಾರ್ಯ ಕೈಗೆತ್ತಿಕೊಂಡಿದ್ದು, 9 ತಿಂಗಳ ಅವಧಿಯಲ್ಲಿ ಶೇ.90ರಷ್ಟು ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ.

ಮಠದ ಗರ್ಭಗುಡಿಯ ಹೊರಭಾಗದ ಸುತ್ತ ಹೊಸ ಗ್ರಾನೈಟ್ ಹಾಸು ಹಾಕಿ ಶಿಥಿಲವಾಗಿದ್ದ ಗೋಡೆಗಳನ್ನು ಗಟ್ಟಿಗೊಳಿಸಲಾಗಿದೆ. ತೆಂಗಿನ ಕಾಯಿ ದಾಸ್ತಾನು ಇರಿಸಲು ಕೊಠಡಿ ನಿರ್ಮಾಣ, ಸ್ವರ್ಣಾ ನದಿಗೆ ಇಳಿದು ಹೋಗಲು ಮೆಟ್ಟಿಲು ದುರಸ್ತಿ, ಭಕ್ತರ ಅನುಕೂಲಕ್ಕಾಗಿ ಶೌಚಗೃಹಗಳನ್ನು ನಿರ್ಮಿಸಲಾಗಿದೆ. ಪಾಳುಬಿದ್ದ 1.25 ಎಕ್ರೆ ಗದ್ದೆಯಲ್ಲಿ ಭತ್ತದ ಕೃಷಿ ಮಾಡಲಾಗಿದೆ.

ಇಂದಿನಿಂದ ರಾಮನವಮಿ ಉತ್ಸವ, 19ರಂದು ಹನುಮಜ್ಜಯಂತಿ: ಶಿರೂರು ಮೂಲ ಮಠದಲ್ಲಿ ಸೋದೆ ವಾದಿರಾಜ ಮಠಾಧೀಶ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಏ.12ರಿಂದ 19ರವರೆಗೆ ರಾಮನವಮಿ ಉತ್ಸವ ಮತ್ತು ಹನುಮಜ್ಜಯಂತಿ ನಡೆಯಲಿದೆ.

12ರಂದು ಬೆಳಗ್ಗೆ 7 ಗಂಟೆಗೆ ಗಣಹೋಮ, ಪವಮಾನ ಹೋಮ, ಸೋದೆ ಮಠ ಹಾಗೂ ಶಿರೂರು ಮಠ ಸಂಸ್ಥಾನ ಪೂಜೆ, ವೇದವ್ಯಾಸ ದೇವರ ಪೂಜೆ, ಪ್ರಾಣದೇವರ ಪೂಜೆ, ವಾದಿರಾಜರ ಪೂಜೆ ಮತ್ತು ತೀರ್ಥ ಪ್ರಸಾದ ನಡೆಯಲಿದೆ. ಸಂಜೆ 5ಕ್ಕೆ ಕಟ್ಟೆಪೂಜೆ, 6.30ಕ್ಕೆ ರಾತ್ರಿಪೂಜೆ, ಪ್ರಾಣದೇವರ ರಂಗಪೂಜೆ, ಭೂತರಾಜರ ಪೂಜೆ.

13ರಂದು ಮನ್ಯುಸೂಕ್ತ ಹೋಮ, ಸಂಸ್ಥಾನ ಪೂಜೆ, ಶಿಖರ ಪೂಜೆ, ಪಲ್ಲಪೂಜೆ, ಅನ್ನಸಂತರ್ಪಣೆ, ಸಂಜೆ 5.30ಕ್ಕೆ ಪ್ರಾಣದೇವರ ರಂಗಪೂಜೆ, ಭೂರರಾಜರ ಪೂಜೆ, ನವಗ್ರಹ ಪೂಜೆ, ರಥೋತ್ಸವ, ಓಲಗ ಮಂಟಪ ಸೇವೆ, ಅಷ್ಟಾವಧಾನ ಹಾಗೂ 8 ರಿಂದ 10.30ರ ವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಕಲಾವಿದರ ಸಹಯೋಗದಲ್ಲಿ ಸುಭದ್ರಾ ಕಲ್ಯಾಣ ಎಂಬ ಯಕ್ಷಗಾನ ಸಂಪನ್ನಗೊಳ್ಳಲಿದೆ.

ಏ.14ಕ್ಕೆ ಸಂಸ್ಥಾನ ಪೂಜೆ, ಚೂರ್ಣೋತ್ಸವ, ಅವಭೃತೋತ್ಸವ, ವಾದಿರಾಜರ ಪೂಜೆ, ಸಂಜೆ 6.30ಕ್ಕೆ ಪ್ರಾಣದೇವರ ರಂಗಪೂಜೆ. ಏ.19ರಂದು ಹನುಮಜ್ಜಯಂತಿ ಅಂಗವಾಗಿ ಬೆಳಗ್ಗೆ 7ಕ್ಕೆ ವಾಯುಸ್ತುತಿ ಪುನಶ್ಚರಣ ಹೋಮ, ಸಂಸ್ಥಾನ ಪೂಜೆ, ಪ್ರಾಣದೇವರ ಪೂಜೆ, ವಾದಿರಾಜರ ಪೂಜೆ, ಸಂಜೆ 6.30ಕ್ಕೆ ಪ್ರಾಣದೇವರಿಗೆ ವಿಶೇಷ ರಂಗಪೂಜೆ, ಭೂತರಾಜರ ಪೂಜೆ ನಡೆಯಲಿದೆ.

ಶಿರೂರು ಮೂಲ ಮಠವನ್ನು 25 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳಿಸಲಾಗಿದೆ. ಮಳೆಗಾಲ ಮುಗಿದ ಬಳಿಕ ಛಾವಣಿ ದುರಸ್ತಿ ಕಾರ್ಯ ಪ್ರಾರಂಭಿಸಲಾಗುವುದು. ಜತೆಗೆ ಸಂಪೂರ್ಣ ಪಾಳುಬಿದ್ದಿರುವ ಪಾಪೂಜೆ ಮಠವನ್ನು ಸ್ವಲ್ಪ ಮಟ್ಟಿಗೆ ದುರಸ್ತಿಗೊಳಿಸಿ, ಅಲ್ಲಿನ ವೃಂದಾವನಕ್ಕೆ ನಿತ್ಯ ಪೂಜೆ ವ್ಯವಸ್ಥೆ ಮಾಡಲಾಗುವುದು. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ರಥಬೀದಿ ಶಿರೂರು ಮಠದಲ್ಲಿ ಅಪೂರ್ಣವಾಗಿದ್ದ 15 ಕೊಠಡಿಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ.
ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಸೋದೆ ಮಠ, ಉಡುಪಿ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...