ಎನ್ಎಚ್ಎಐ ಚೇರ್ಮನ್ ವಿರುದ್ಧ ಇಡಿಗೆ ದೂರು

Pranavananda swamiji press meet
Published on

ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೇರ್ಮನ್ ಹಾಗೂ ಅಧಿಕಾರಿಗಳ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುವುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಪೀಠದ ಡಾ.ಪ್ರಣವಾನಂದ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 66 ರ ಚತುಷ್ಪಥ ವಿಸ್ತರಣೆ ಕಾಮಗಾರಿಯನ್ನು ಎನ್ಎಚ್ ಎಐ 2013 ರಲ್ಲಿ ಐಆರ್ ಬಿಗೆ ವಹಿಸಿದೆ. ಆದರೆ, ಐಆರ್ ಬಿ ಕಂಪನಿ ಒಪ್ಪಂದದ ಯಾವುದೇ ನಿಯಮಗಳನ್ನು ಪಾಲಿಸದೇ ಜನರ ಸಾವಿಗೆ ಕಾರಣವಾಗಿದೆ.
ಐಆರ್ ಬಿ ಕಂಪನಿಯ 8 ನಿರ್ದೇಶಕರ ವಿರುದ್ಧ ಅಂಕೋಲಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ. ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ನ್ಯಾಯಾಲಯ ಅಂಕೋಲಾ ಪೊಲೀಸರಿಗೆ ಸೂಚನೆ ನೀಡಿದೆ. ತಕ್ಷಣ ಎಫ್ಐಆರ್ ದಾಖಲಿಸಿ ಎಲ್ಲ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
ಆದರೆ, ಇಷ್ಟಕ್ಕೇ ಮುಗಿದಿಲ್ಲ.‌ ಎನ್ಎಚ್ಎಐ ಗೂ ಜವಾಬ್ದಾರಿ ಇದೆ. ಇದರಿಂದ ಎನ್ಎಚ್ಎಐ ಅಧಿಕಾರಿಗಳ ವಿರಿದ್ಧವೂ ಪ್ರಕರಣ ದಾಖಲಿಸಲು ಸರ್ಕಾರದ ಅನುಮತಿ ಕೇಳಿದ್ದೇವೆ. ಇಡೀ ರಾಜ್ಯದಲ್ಲಿ ಎನ್ಎಚ್ಎಐ ಸಾಕಷ್ಟು ಕಾಮಗಾರಿ ಕೈಗೊಂಡಿದೆ. ಅದೆಲ್ಲವನ್ನೂ ತನಿಖೆಗೆ ಒಳಪಡಿಸಬೇಕು. ಐಆರ್ ಬಿ ಕಂಪನಿಯನ್ನು ಕಪ್ಪು ಪಟ್ಟಿಗೆ ನಡೆಸಬೇಕು. ಇಡೀ ಕಾಮಗಾರಿಯ‌ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು 19 ರಂದು ಸಲ್ಲಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net