20.3 C
Bangalore
Sunday, December 15, 2019

ನಮಗೆ ನರೇಂದ್ರ ಮೋದಿಯವರ ಬಗ್ಗೆ ಗೌರವ ಇದೆ, ಆದರೆ ಅಮಿತ್​ ಷಾ….; ಸಂಜಯ್​ ರಾವತ್​ ತೀವ್ರ ವಾಗ್ದಾಳಿ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ವಿರುದ್ಧ ಶಿವಸೇನೆ ಸತತವಾಗಿ ವಾಗ್ದಾಳಿ ನಡೆಸುತ್ತಲೇ ಇದೆ. ತಾವು 50-50 ಅಧಿಕಾರ ಹಂಚಿಕೆಗೆ ಬೇಡಿಕೆ ಇಟ್ಟಿದ್ದರೂ ಬಿಜೆಪಿ ಅದಕ್ಕೆ ಒಪ್ಪಲಿಲ್ಲ ಎಂಬ ಅಸಮಾಧಾನವನ್ನು ವ್ಯಕ್ತಪಡಿಸುತ್ತಲೇ ಇದೆ.

ಬಿಜೆಪಿ ಮತ್ತು ಶಿವಸೇನೆ ನಡುವೆ 50-50 ಆಡಳಿತ ಹಂಚಿಕೆ ಒಪ್ಪಂದವಾಗಿದೆ ಎಂದು ಉದ್ಧವ್​ಠಾಕ್ರೆ ಹೇಳಿದ್ದನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅಲ್ಲಗಳೆದಿದ್ದರು. ಹಾಗೇನೂ ಒಪ್ಪಂದವಾಗಿಲ್ಲ ಎಂದಿದ್ದರು.
ಈ ಬೆನ್ನಲ್ಲೇ ಅಮಿತ್​ ಷಾ ವಿರುದ್ಧ ಶಿವಸೇನೆ ಮುಖಂಡ ಸಂಜಯ್​ ರಾವತ್​ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರತಿ ಸಾರ್ವಜನಿಕ ಸಭೆಯಲ್ಲೂ ಪ್ರಧಾನಿ ನರೇಂದ್ರ ಮೋದಿಯವರು ದೇವೇಂದ್ರ ಫಡ್ನವೀಸ್​ ಅವರೇ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಎನ್ನುತ್ತಿದ್ದರು. ಹಾಗೇ ಉದ್ಧವ್​ ಠಾಕ್ರೆಯವರೂ ಮುಂದಿನ ಮುಖ್ಯಮಂತ್ರಿಯನ್ನು ಶಿವಸೇನೆಯಿಂದ ಆಯ್ಕೆ ಮಾಡಬೇಕು ಎನ್ನುತ್ತಿದ್ದರು. ಬಿಜೆಪಿ-ಶಿವಸೇನೆ ಮಧ್ಯೆ ಒಪ್ಪಂದ ಆಗದೆ ಇದ್ದರೆ ಅವರೇಕೆ ಹೀಗೆ ಹೇಳುತ್ತಿದ್ದರು. ಅದು ಗೊತ್ತಿದ್ದರೂ ಅಮಿತ್​ ಷಾ ಸುಮ್ಮನಿದ್ದಾರೆ. ಪ್ರಧಾನಿ ಮೋದಿಯವರಿಗೆ ಈ ಬಗ್ಗೆ ವಿಷಯ ತಿಳಿಸಲಿಲ್ಲ ಎಂದು ಸಂಜಯ್​ ರಾವತ್​ ಆರೋಪಿಸಿದ್ದಾರೆ.

50-50 ಅಧಿಕಾರ ಹಂಚಿಕೆ ನಿರ್ಧಾರದ ಬಗ್ಗೆ ಅಮಿತ್​ ಷಾ ಅವರು ನರೇಂದ್ರ ಮೋದಿಯವರಿಗೆ ತಿಳಿಸಿದ್ದರೆ ಇಂದು ನಮಗೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ. ನಾವು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೌರವಿಸುತ್ತೇವೆ. ಆದರೆ ಈ ವಿಚಾರದಲ್ಲಿ ಅವರನ್ನು ಅಮಿತ್​ ಷಾ ಕತ್ತಲಲ್ಲಿ ಇಟ್ಟಿದ್ದಾರೆ. ಸ್ಥಾನ ಹಂಚಿಕೆ ಕುರಿತು ಬಿಜೆಪಿ ಮತ್ತು ಶಿವಸೇನೆ ಸೇರಿಯೇ ನಿರ್ಧಾರ ತೆಗೆದುಕೊಂಡಿದೆ. ಆದರೆ ಬಿಜೆಪಿ ನಾಯಕರು ನರೇಂದ್ರ ಮೋದಿಯವರನ್ನು ಈ ವಿಚಾರದಿಂದ ದೂರವಿಟ್ಟಿದ್ದರೆ ಅದೊಂದು ಅಚ್ಚರಿಯೇ ಸರಿ ಎಂದು ಹೇಳಿದ್ದಾರೆ.

ಸಂಜಯ್​ ರಾವತ್​ ಹಾಗೂ ಅಮಿತ್​ ಷಾ ಇಬ್ಬರೂ ಠಾಕ್ರೆಯವರ ಮುಂಬೈನ ನಿವಾಸದಲ್ಲಿಯೇ ಭೇಟಿಯಾಗಿದ್ದರು. ಬಾಳಾ ಸಾಹೇಬ್​ ಠಾಕ್ರೆಯವರ ಮನೆಯದು. ನಮ್ಮ ಪಾಲಿಗೆ ಅದು ದೇವಸ್ಥಾನ. ಅಲ್ಲಿಯೇ ಮಾತುಕತೆಯಾಗಿದೆ. ಈಗ ಅಧಿಕಾರ ಹಂಚಿಕೆಯ ಬಗ್ಗೆ ನಾವು ಭರವಸೆ ನೀಡಿಲ್ಲ ಎಂದು ಯಾರಾದರೂ ಹೇಳಿದರೆ ಅದು ಆ ದೇವಸ್ಥಾನಕ್ಕೇ ಮಾಡಿದ ಅವಮಾನ. ಯಾಕೆಂದರೆ ಶಿವ ಸೈನಿಕರಿಗೆ ಆ ಜಾಗ ಪವಿತ್ರ ಸ್ಥಾನ ಎಂದು ಸಂಜಯ್​ ರಾವತ್​ ತಿಳಿಸಿದ್ದಾರೆ.

ಮುಚ್ಚಿದ ಬಾಗಿಲ ಹಿಂದೆ ನೀಡಿದ ಭರವಸೆಯನ್ನು ಈಡೇರಿಸದೆ ಇದ್ದಾಗ ಅದನ್ನು ಹೊರಗೆಳೆಯಲೇ ಬೇಕು. ಈಗ ಅಮಿತ್​ ಷಾ ಅವರು ಅಂತಹ ಗುಪ್ತ ಸಭೆಗಳಲ್ಲಿ ಆಗಿದ್ದನ್ನು ಬಹಿರಂಗಪಡಿಸಬಾರದು ಎನ್ನುತ್ತಾರೆ. ಆದರೆ ಆತ್ಮಗೌರವದ ಪ್ರಶ್ನೆ ಬಂದಾಗ ಹೇಳಲೇಬೇಕಾಗುತ್ತದೆ ಎಂದಿದ್ದಾರೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...