More

    ಶಿವಸೇನೆ, ಎಂಇಎಸ್ ಪುಂಡಾಟಿಕೆಗೆ ಖಂಡನೆ

    ಬೆಳಗಾವಿ: ಜಿಲ್ಲೆಯ ಗಡಿಭಾಗದಲ್ಲಿ ಶಿವಸೇನೆ ಗುರುವಾರ ನಡೆಸಿದ ಪುಂಡಾಟಿಕೆ ಖಂಡಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

    ಶಿವಸೇನೆ, ಎಂಇಎಸ್ ಪುಂಡಾಟಿಕೆಗೆ ಖಂಡನೆ

    ಹೋರಾಟಗಾರರು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಶಿವಸೇನೆ ಮುಖಂಡರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬೆಳಗಾವಿ ನಮ್ಮದೇ ಎಂದು ಘೋಷಣೆ ಕೂಗಿದರು. ಅದಕ್ಕೂ ಮುನ್ನ 35ಕ್ಕೂ ಹೆಚ್ಚಿನ ವಾಹನಗಳಲ್ಲಿ ಬೆಳಗಾವಿ ಪ್ರವೇಶಕ್ಕೆ ಮುಂದಾಗಿದ್ದ ಕನ್ನಡ ಹೋರಾಟಗಾರರನ್ನು ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿ ತಡೆದರು. ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಹೋರಾಟಗಾರರು ಹೆದ್ದಾರಿ ತಡೆಯಲು ಮುಂದಾದರು. ಬಳಿಕ ಚನ್ನಮ್ಮ ವೃತ್ತದವರೆಗೆ ಬರಲು ಹೋರಾಟಗಾರರಿಗೆ ಅನುಮತಿ ನೀಡಲಾಯಿತು.

    ಶಿವಸೇನೆ, ಎಂಇಎಸ್ ಪುಂಡಾಟಿಕೆಗೆ ಖಂಡನೆ

    ಹಿರೇಬಾಗೇವಾಡಿಯಿಂದ ಪೊಲೀಸ್ ಭದ್ರತೆಯಲ್ಲೇ ಕನ್ನಡ ಸಂಘಟನೆ ಕಾರ್ಯಕರ್ತರು ಚನ್ನಮ್ಮ ವೃತ್ತಕ್ಕೆ ಆಗಮಿಸಿದರು. ಕೆಲ ಹೊತ್ತು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬಳಿಕ ಶಿನ್ನೋಳಿಗೆ ತೆರಳಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆದೊಯ್ದರು.

    ಕರವೇ ಯುವಸೇನೆ ರಾಜ್ಯಾಧ್ಯಕ್ಷ ಹರೀಶ್, ಉಪಾಧ್ಯಕ್ಷ ಕೃಷ್ಣಾಜಿರಾವ್, ಶ್ರೀಕಾಂತ ಚಿಂತಾಮಣಿ, ಗಣೇಶ ಆಟೋ, ಮಂಜುನಾಥ ಆಟೋ ಸೇರಿ ರಾಜ್ಯದ ವಿವಿಧ ಭಾಗಗಳಿಂದ ಯುವಸೇನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts