ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನೆ ಸಂಸದೆ ಆಪ್ತ ಸಹಾಯಕನ ಬಂಧನ..

pic mp
Published on

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವತ್ಮಾಲ್-ವಾಶಿಮ್‌ ಲೋಕಸಭಾ ಕ್ಷೇತ್ರದ ಶಿವಸೇನೆ ಸಂಸದೆ ಭಾವನಾ ಗವಲಿ ಅವರ ಆಪ್ತ ಸಹಾಯಕನನ್ನು ಬಂಧಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಇಡಿ ಅಧಿಕಾರಿಗಳು ಸಂಸದೆಯ ಆಪ್ತ ಸಹಾಯಕ ಶಾಹಿದ್ ಖಾನ್​​ನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಭಾವನಾ ಗವಲಿ ಅವರ ಹೆಸರು ಬಂಧಿತ ಆರೋಪಿ ಶಾಹಿದ್ ಜೊತೆ ತಳಕು ಹಾಕಿಕೊಂಡಿದೆ. ಈತ 17 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ.

ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ಹಣ ದಂಧೆ ಮಾಡುತ್ತಿದ್ದ ಆರೋಪಿ ಶಾಹಿದ್ ಖಾನ್​ಗೆ ಸಹಕಾರ ನೀಡಿದ್ದಾರೆ ಎಂಬ ಆರೋಪವನ್ನು ಸಂಸದೆ ಎದುರಿಸುತ್ತಿದ್ದಾರೆ. ಇಡಿ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಆರೋಪಿತರು 43 ಕೋಟಿ ರೂ. ಹಣವನ್ನು ಸಾಲ ಪಡೆದು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಮುಂಬೈ ಪೊಲೀಸರು ಎಫ್​ಐಆರ್​ ದಾಖಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net