ಪಿಎಂಸಿ ಬ್ಯಾಂಕ್ ಹಗರಣ ವಿಚಾರದಲ್ಲಿ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್ ಅವರಿಗೆ ಸಮನ್ಸ್ ಕಳುಹಿಸಲಾಗಿದೆ. ಈ ಹಿಂದೆಯೇ ಎರಡು ಬಾರಿ ಸಮನ್ಸ್ ಕಳುಹಿಸಲಾಗಿದ್ದು, ಎರಡೂ ಬಾರಿಯೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಇದೀಗ ಮೂರನೇ ಬಾರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಈ ವಿಚಾರವಾಗಿ ಶಿವಸೇನೆ ಸಿಡಿದೆದ್ದಿದ್ದು, ಜಾರಿ ನಿರ್ದೇಶನಾಲಯ ಕೇಂದ್ರ ಸರ್ಕಾರದ ಅಡಿಯಾಳಾಗಿ ಕೆಲಸ ಮಾಡುತ್ತಿದೆ ಎಂದು ದೂರಿದೆ.