ಆಸ್ಪತ್ರೆಗೆ ದಾಖಲಾದ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌

hero shivanna
Published on

ಬೆಂಗಳೂರು: ಹ್ಯಾಟ್ರಿಕ್‌ ಹಿರೋ, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿರುವ ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್ ಅವರ ಪರವಾಗಿ ಪತಿ ಶಿವರಾಜ್ ಕುಮಾರ್ ಭರ್ಜರಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಬೇಸಿಗೆಯ ತೀವ್ರತೆಯಿಂದಾಗಿ ಶಿವರಾಜ್​ ಕುಮಾರ್​ ಸುಸ್ತಾಗಿದ್ದರು. ಶಿವಣ್ಣ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ.

ಆಗಿದ್ದೇನು?: ದೇವನಹಳ್ಳಿ ಬಳಿ ಚಿತ್ರೀಕರಣದ ವೇಳೆ ಸುಸ್ತಾಗ್ತಿದೆ ಎಂದ ಶಿವರಾಜ್​ ಕುಮಾರ್ ಅವರು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು ಕೆಲವು ಪರೀಕ್ಷೆಗಳನ್ನು ಮಾಡಿಸಿ ವರದಿ ಪಡೆದು ಮತ್ತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಭಾನುವಾರ ಮತ್ತೆ ಶೂಟಿಂಗ್ ಸೆಟ್​ನಲ್ಲಿ ಧೂಳು ಆವರಿಸಿ ಮತ್ತೆ ಸುಸ್ತಾಗಿದ್ದಾರೆ ಎನ್ನಲಾಗಿದೆ. ಶಿವಣ್ಣ ಮತ್ತೆ (ಇಂದು) ಸೋಮವಾರ ಚಿಕಿತ್ಸೆ ಆಸ್ಪತ್ರೆಗೆ ತೆರಳಿದಿದ್ದಾರೆ. ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ವೈದ್ಯರ ಸೂಚನೆ ನೀಡಿದ್ದರಿಂದ ಶಿವರಾಜ್​ ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿವರಾಜ್​ ಕುಮಾರ್​ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ತಿಳಿಸಿವೆ. ಮಂಗಳವಾರ ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net