ಮಾಯಾವಿ ಯಾರು? ‘ಶಿವಾಜಿ ಸುರತ್ಕಲ್ 2’ ಟ್ರೇಲರ್ ಬಿಡುಗಡೆ …

blank

ಬೆಂಗಳೂರು: ‘ಶಿವಾಜಿ ಸುರತ್ಕಲ್​’ ಚಿತ್ರವು 2020ರ ಫೆಬ್ರವರಿಯಲ್ಲಿ ಬಿಡುಗಡೆಯಾಗಿ ಹಿಟ್​ ಆಗಿತ್ತು. ಆ ಚಿತ್ರದ ಬಿಡುಗಡೆಯ ಸಂದರ್ಭದಲ್ಲೇ, ಸೀಕ್ವೆಲ್​ ಬಗ್ಗೆ ಮಾತು ಕೇಳಿ ಬಂದಿತ್ತು. ಅದಕ್ಕೆ ಸರಿಯಾಗಿ ಲಾಕ್​ಡೌನ್​ ಸಮಯದಲ್ಲಿ ಈ ಕಥೆಯನ್ನು ಹೇಗೆ ಮುಂದುವರೆಸಬಹುದು ಎಂದು ಯೋಚಿಸುತ್ತಿದ್ದಾಗ, ‘ದಿ ಕೇಸ್​ ಆಫ್ ಮಾಯಾವಿ’ಯ ಕಥೆ ಹೊಳೆಯಿತಂತೆ. ಈಗ ಆ ಚಿತ್ರವು ಮುಗಿದು ಬಿಡುಗಡೆಯ ಹಂತಕ್ಕೆ ಬಂದಿದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ-ವಿಜಯ್​ ದೇವರಕೊಂಡ ಬೇರೆಯಾಗಲು ಈ ನಟ ಕಾರಣವಂತೆ!?

ರಮೇಶ್​ ಅರವಿಂದ್​ ಅಭಿನಯದ ‘ಶಿವಾಜಿ ಸುರತ್ಕಲ್​ 2′ ಚಿತ್ರವು ಏಪ್ರಿಲ್​ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಇತ್ತೀಚೆಗೆ ಟ್ರೇಲರ್​ ಬಿಡುಗಡೆಯಾಗಿದ್ದು, ವೀಕ್ಷಕರಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಈ ಚಿತ್ರ ಶುರುವಾದ ಕುರಿತು ಮಾತನಾಡಿರುವ ನಿರ್ದೇಶಕ ಆಕಾಶ್​ ಶ್ರೀವತ್ಸ, ”ಶಿವಾಜಿ ಸುರತ್ಕಲ್ 2″ ಲಾಕ್​ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ನಾನು ಹಾಗೂ ರಮೇಶ್ ಸರ್ ವಾಟ್ಸಪ್ ಮೂಲಕ ಎರಡನೇ ಭಾಗದ ಕಥೆಯನ್ನು ಚರ್ಚಿಸಿದೆವು. ಎಲ್ಲರಿಗೂ ಲಾಕ್​ಡೌನ್ ನಿಂದ ತೊಂದರೆ ಆದರೆ, ನಮಗೆ ಮಾತ್ರ ಈ ಚಿತ್ರದ ಕಥೆ ಬರೆಯಲು ಅನುಕೂಲವಾಯಿತು. ನಮ್ಮ‌ ತಂಡದ ಸಹಕಾರದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ. ಇದೇ ಏಪ್ರಿಲ್ 14 ರಂದು ನಮ್ಮ ಶಿವಾಜಿ ಮತ್ತೆ ಹೊಸ ಕೇಸ್ ಹೊತ್ತು ಬರಲಿದ್ದಾನೆ. ಎಲ್ಲರಲ್ಲೂ ಮನೆ ಮಾಡಿರುವ ಮಾಯಾವಿ” ಯಾರು? ಎಂಬ ಪ್ರಶ್ನೆಗೆ ಅಂದೆ ಉತ್ತರ ಸಿಗಲಿದೆ’ ಎಂದು ತಿಳಿಸಿದರು.

ಕುಟುಂಬ ಸಮೇತ ಈ ಚಿತ್ರ ನೋಡಲು ಬನ್ನಿ ಎಂದು ಕರೆ ನೀಡುವ ರಮೇಶ್​ ಅರವಿಂದ್​, ‘ಒಂದೊಳ್ಳೆಯ ತಂಡದ ಜತೆಗೆ ಕೆಲಸ ಮಾಡಿದ ಖುಷಿಯಿದೆ. ‘ಶಿವಾಜಿ ಸುರತ್ಕಲ್ 2′ ಚಿತ್ರದ ಟ್ರೇಲರ್ ಚೆನ್ನಾಗಿದೆ. ಇದೇ ಏಪ್ರಿಲ್ 14 ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನಾನು ಪ್ರತಿ ವೀಕೆಂಡ್ ನಿಮ್ಮ ಮನೆಗೆ ಬರುತ್ತೇನೆ. ನೀವು ಕುಟುಂಬ ಸಮೇತ ನಮ್ಮ ಚಿತ್ರ ನೋಡಲು ಚಿತ್ರಮಂದಿರಕ್ಕೆ ಬನ್ನಿ’ ಎನ್ನುತ್ತಾರೆ.

ಇದನ್ನೂ ಓದಿ: ನಟಿ ನಗ್ಮಾ ಜತೆ ವಿವಾಹೇತರ ಸಂಬಂಧ ವದಂತಿ: ಕೊನೆಗೂ ಮೌನ ಮುರಿದ ನಟ ರವಿಕಿಶನ್​

‘ಶಿವಾಜಿ ಸುರತ್ಕಲ್​ 2’ ಚಿತ್ರದಲ್ಲಿ ರಾಧಿಕಾ ಚೇತನ್, ಮೇಘನಾ ಗಾಂವ್ಕರ್, ನಾಜರ್​, ವಿನಾಯಕ ಜೋಷಿ, ಸಂಗೀತಾ ಶೃಂಗೇರಿ, ರಘು ರಮಣಕೊಪ್ಪ, ವಿದ್ಯಾಮೂರ್ತಿ ಮುಂತಾದವರು ನಟಿಸಿದ್ದು, ಚಿತ್ರವನ್ನು ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ನಿರ್ಮಿಸಿದ್ದಾರೆ.

ಮೂರು ಚಿತ್ರಗಳಿಗೆ ಸುದೀಪ್​ ಗ್ರೀನ್​ ಸಿಗ್ನಲ್​; ಸದ್ಯದಲ್ಲೇ ಘೋಷಣೆ

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…