More

    ಶಿವಮೊಗ್ಗದ ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆ ನಡೆಯಲಿ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹ

    ಬಳ್ಳಾರಿ: ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಶಿವಮೊಗ್ಗದ ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆ ನಡೆಸಬೇಕು ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಗ್ರಹಿಸಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಿವಮೊಗ್ಗ ಘಟನೆಗೆ ಯಾರು ಹೊಣೆ? ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ತವರು ಕ್ಷೇತ್ರವಾದರೂ ಅಕ್ರಮ ಗಣಿಗಾರಿಕೆ ತಡೆಯಲು ಯಾಕೆ ಆಗ್ತಿಲ್ಲ. ಬಿಜೆಪಿ ಮುಖಂಡರೇ ಶಿವಮೊಗ್ಗದಲ್ಲಿ ಗಣಿಗಾರಿಕೆ ಮಾಡುತ್ತಿದ್ದಾರೆ. ಇದಕ್ಕೆ ಈಶ್ವರಪ್ಪ ಬೆಂಬಲವಿದೆ ಎಂದು ಆರೋಪಿಸಿದ ಉಗ್ರಪ್ಪ, ನೈತಿಕ ಹೊಣೆ ಹೊತ್ತು ಯಡಿಯೂರಪ್ಪ, ಈಶ್ವರಪ್ಪ ರಾಜೀನಾಮೆ ನೀಡಬೇಕು.

    ಶಿವಮೊಗ್ಗ ದುರಂತದಲ್ಲಿ ಸಾವಿಗೀಡಾದವರಿಗೆ ಅಕ್ರಮ ಗಣಿಗಾರಿಕೆ ಮಾಡುವವರಿಂದ ವಸೂಲಿ ಮಾಡಿ ಸೂಕ್ತ ಪರಿಹಾರ ವಿತರಿಸಬೇಕು. ವನ್ಯಜೀವಿಗಳು, ಜಲಮೂಲವಿರುವ ಪ್ರದೇಶಗಳಲ್ಲಿ ಗಣಿಗಾರಿಕೆ ನಡೆಸಬಾದೆಂದು ಸುಪ್ರೀಂಕೋರ್ಟ್ ಹೇಳಿದೆ. ಅದರೆ ಇಲ್ಲಿ ಮಾತ್ರ ಎಗ್ಗಿಲ್ಲದೆ ಗಣಿಗಾರಿಕೆ ನಡೆಯುತ್ತಿದೆ. ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿವೆ, ರಾಜ್ಯದ ಸಂಪತ್ತು ಉಳಿಸುವ ಕಾರ್ಯ ಸರ್ಕಾರ ಮಾಡುತ್ತಿಲ್ಲ ಎಂದು ಅರೋಪಿಸಿದರು.

    ಗಣಿ ಉದ್ಯಮಿ ಟಪಾಲ್ ಗಣೇಶ್, ಕಾಂಗ್ರೆಸ್ ಮುಖಂಡರಾದ ಸಿ.ಮಾರೆಣ್ಣ, ನಾಗರಾಜ ಗೌಡ, ಹನುಮ ಕಿಶೋರ್, ಕೋಮಾರೆಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts