ಮಹನೀಯರ ತತ್ವಾದರ್ಶ ಅಳವಡಿಸಿಕೊಳ್ಳಿ

13 hhr vivekananda jayanthi
ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಿದರು. ಮಲ್ಲೇಶಪ್ಪ, ಪಿ.ಎಸ್.ಕಿರಣ್‌ಕುಮಾರ್, ಚಂದ್ರುಕುಮಾರ್, ಎ.ಎಂ.ಚಂದ್ರಶೇಖರ್ ಇತರರಿದ್ದರು.
Published on

ಹೊಳೆಹೊನ್ನೂರು: ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಯುವಜನರಿಗೆ ಮಾರ್ಗದರ್ಶಕ ಎಂದು ಹೊಳೆಹೊನ್ನೂರು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲೇಶಪ್ಪ ಹೇಳಿದರು.

ಸಮೀಪದ ಕಲ್ಲಿಹಾಳ್ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವ ಕಂಡ ಅತ್ಯಂತ ಶ್ರೇಷ್ಠ ಮಹನೀಯರಲ್ಲಿ ವಿವೇಕಾನಂದರು ಪ್ರಮುಖರು. ಅವರ ತತ್ವಾದರ್ಶಗಳು ಯುವ ಪೀಳಿಗೆಗೆ ದಾರಿದೀಪ ಎಂದು ತಿಳಿಸಿದರು.

ಹೊಳೆಹೊನ್ನೂರು ಯುವ ಮೋರ್ಚಾ ಅಧ್ಯಕ್ಷ ಪಿ.ಎಸ್.ಕಿರಣ್‌ಕುಮಾರ್ ಮಾತನಾಡಿ, ವಿವೇಕಾನಂದರು ಹಾಕಿಕೊಟ್ಟ ಮಾರ್ಗದಲ್ಲಿ ಯುವ ಸಮೂಹ ಸಾಗಬೇಕಿದೆ. ಮಹನೀಯರ ಜಯಂತಿಗಳು ಅವರ ಸಾಧನೆಗಳನ್ನು ಮೆಲುಕು ಹಾಕುವ ಜತೆಗೆ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಮುಖಂಡರಾದ ಉಜ್ಜಿನಪ್ಪ, ನಾಗರಾಜಪ್ಪ, ಮಂಡಲ ಪ್ರಧಾನ ಕಾರ್ಯದರ್ಶಿ ಚಂದ್ರುಕುಮಾರ್, ಅರಬಿಳಚಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎ.ಎಂ.ಚಂದ್ರಶೇಖರ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರು, ನಂಜುಂಡಿ, ಅನೂಪ್ ಪಟೇಲ್, ಚಂದು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net