More

    ಅಡಕೆಗೆ ಅನುದಾನ ಮೀಸಲಿಡದಿದ್ರೆ ಆರಗ ಜ್ಞಾನೇಂದ್ರ ರಾಜೀನಾಮೆಗೆ ಒತ್ತಾಯ: ರಮೇಶ್ ಹೆಗ್ಡೆ

    ಶಿವಮೊಗ್ಗ: ಬಜೆಟ್ ಅಧಿವೇಶನದಲ್ಲಿ ಅಡಕೆ ಬೆಳೆಗೆ ಎದುರಾಗಿರುವ ಸಂಕಷ್ಟದ ಬಗ್ಗೆ ಚರ್ಚೆ ನಡೆಸಬೇಕು. ಜತೆಗೆ ಅಡಕೆಗೆ ಅನುದಾನವನ್ನೂ ಮೀಸಲಿಡಬೇಕು. ಇಲ್ಲವಾದಲ್ಲಿ ಅಡಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಲಾಗುವುದು ಎಂದು ಜಿಲ್ಲಾ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಎ.ರಮೇಶ್ ಹೆಗ್ಡೆ ಎಚ್ಚರಿಕೆ ನೀಡಿದರು.
    ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಅಡಕೆಯನ್ನು ಸೇರ್ಪಡೆ ಮಾಡದಿರುವುದು ಬೆಳೆಗಾರರ ಬಗ್ಗೆ ಇರುವ ಕಾಳಜಿಯನ್ನು ಎತ್ತಿ ತೋರುತ್ತಿದೆ. ರಾಜ್ಯ ಸರ್ಕಾರ ಈ ಯೋಜನೆಯಡಿ ಅಡಕೆಯನ್ನು ಕೈಬಿಟ್ಟಿದ್ದೇಕೆ ಎಂಬುದನ್ನು ಸ್ಪಷ್ಟಪಡಿಸಬೇಕಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
    ಅಡಕೆ ಬೆಳೆಗಾರರ ಹಿತ ಕಾಯುವಲ್ಲಿ ಕಾರ್ಯಪಡೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ. 31 ಜಿಲ್ಲೆಗಳ ಪೈಕಿ 23ರಲ್ಲಿ ಅಡಕೆ ಬೆಳೆಯಲಾಗುತ್ತಿದೆ. ಅದರಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾನಸ, ಕೊಡಗು ಸೇರಿ 10 ಜಿಲ್ಲೆಗಳಲ್ಲಿ ಅಡಕೆ ಪ್ರಮುಖ ಬೆಳೆಯಾಗಿದೆ. ಆದರೂ ಒಂದು ಜಿಲ್ಲೆ ಒಂದು ಉತ್ಪನ್ನದಲ್ಲಿ ಸೇರಿಸಿಲ್ಲ. ಇದು ಬಿಜೆಪಿ ಸರ್ಕಾರ ಅಡಕೆ ಬೆಳೆಗಾರರಿಗೆ ಮಾಡುತ್ತಿರುವ ದ್ರೋಹ ಎಂದು ಕಿಡಿಕಾರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts