ಕೋಹಳ್ಳಿಯಲ್ಲಿ ಜಾಗೃತಿ ಕಾರ್ಯಕ್ರಮ

5 anr 1
ವಿಶ್ವ ಪರಿಸರ ದಿನದ ಪ್ರಯುಕ್ತ ಆಯನೂರಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಗಿಡ ನೆಡಲಾಯಿತು. ಡಾ. ಎ.ಗಣೇಶ್ ಭಟ್, ಅಸ್ಲಾಂ, ಮಹದೇವಪ್ಪ, ಗಿರೀಶ್ ಇತರರಿದ್ದರು.
Published on

ಆಯನೂರು: ಸಮೀಪದ ಕೋಹಳ್ಳಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನ, ಡೆಂಘೆ ಹಾಗೂ ಚಿಕೂನ್‌ಗುನ್ಯಾ ರೋಗಗಳ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವಿಶ್ವ ಪರಿಸರ ದಿನದ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯವನ್ನು ಸೋಲಿಸಿ ಎಂದು ಘೋಷಣೆ ಕೂಗಲಾಯಿತು. ಉರ್ದು ಶಾಲೆ ಮುಖ್ಯಶಿಕ್ಷಕ ಎಚ್.ರಾಘವೇಂದ್ರ, ಶೇರ್ ಅಲಿ ಖಾನ್, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಎನ್‌ಎಸ್‌ಎಸ್ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಪ್ರಾಚಾರ್ಯ ಡಾ. ಎ.ಗಣೇಶ್ ಭಟ್, ಅರಣ್ಯ ಇಲಾಖೆ ಅಧಿಕಾರಿ ಅಸ್ಲಾಂ, ರೋಹನ್ ಡಿಕಾಸ್ಟ, ಗಿರೀಶ್, ಮಹಾದೇವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net