More

    ಶಿವಮೊಗ್ಗದಲ್ಲಿ ಭೀಕರ ಸ್ಫೋಟ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

    ಬೆಂಗಳೂರು: ಶಿವಮೊಗ್ಗದ ಹುಣಸೋಡಿ ಬಳಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

    ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಗೊತ್ತಾಗಿದೆ. ಸಂಸತ್ ಸದಸ್ಯ ರಾಘವೇಂದ್ರ ಘಟನಾ ಸ್ಥಳದಲ್ಲೇ ಇದ್ದಾರೆ. ಸಚಿವ ಮುರುಗೇಶ್ ನಿರಾಣಿ ಕೂಡ ಸ್ಥಳಕ್ಕೇ ಹೋಗುತ್ತಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿರಿ ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

    ಸ್ಫೋಟ ಪ್ರಕರಣದ ಪ್ರಾಥಮಿಕ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಶಿವಮೊಗ್ಗ ಅಷ್ಟೇ ಅಲ್ಲ, ರಾಜ್ಯಾದ್ಯಂತ ಇರುವ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತನಿಖೆ ಬಳಿಕವೇ ಯಾವ ಕಾರಣಕ್ಕೆ ಸ್ಫೋಟ ಆಯ್ತು ಎಂಬುದು ಬಹಿರಂಗವಾಗಲಿದೆ. ಮೊದಲು ವರದಿ ಬರಲಿ. ವರದಿ ಬಂದ್ಮೇಲೆ ಯಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವೆ ಎಂದು ಎಚ್ಚರಿಸಿದ ಸಿಎಂ, ನಾನು ನಾಳೆ ಘಟನಾ ಸ್ಥಳಕ್ಕೆ ಭೇಡಿ ಕೊಡುವೆ ಎಂದರು.

    ಕ್ಷಣಕ್ಷಣಕ್ಕೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಅವರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಫೋನ್​ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ.

    100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

    ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

    ಪ್ರಯಾಣಿಕರ ಕಣ್ಣೆದುರಲ್ಲೇ ಸಾರಿಗೆ ಬಸ್​ ಚಾಲಕನಿಗೆ ಚಾಕು ಚುಚ್ಚಿದ ದುಷ್ಕರ್ಮಿ! ಬೆಚ್ಚಿಬೀಳಿಸುತ್ತೆ ಈ ದೃಶ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts