

ಆನಂದಪುರ: ರಕ್ತದಾನ ಮಾಡುವುದರಿಂದ ಮನುಷ್ಯನ ಆರೋಗ್ಯ ಸಹ ಉತ್ತಮವಾಗಿರುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಶಿಕ್ಷಣ ನಿದೇರ್ಶಕ ಡಾ. ಹೇಮ್ಲಾನಾಯ್ಕ ಹೇಳಿದರು.
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಸಮೀಪದ ಇರುವಕ್ಕಿಯ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ಸಸ್ಯಗಳಿಗೆ ಕೆರೋಫಿಲ್ ಅಗತ್ಯ ಇರುವಂತೆ ಮನುಷ್ಯನಿಗೆ ರಕ್ತ ಅಗತ್ಯವಿದೆ ಎಂದು ತಿಳಿಸಿದರು.
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕ ಶಿವಮೊಗ್ಗ ಧರಣೇಂದ್ರ ದಿನಕರ್ ಅವರು ರಕ್ತದಾನದಿಂದ ದೊರಕುವ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡಿದರು. 71 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ವಿವಿ ವಿಶೇಷಾಧಿಕಾರಿ ಡಾ. ಕೆ.ಸಿ.ಶಶಿಧರ, ವಿವಿ ಹಣಕಾಸು ನಿಯಂತ್ರಣಾಧಿಕಾರಿ ಆತ್ರೇಯ, ಡಾ. ನಿಂಗರಾಜು, ನಿಲಯ ಪಾಲಕಿ ಡಾ. ಶಿಲ್ಪಾ, ರೆಡ್‌ಕ್ರಾಸ್ ಘಟಕದ ನೋಡಲ್ ಅಧಿಕಾರಿ ಡಾ. ಪ್ರಿಯಾ ಕಿವಡಸಣ್ಣನವರ ಇತರರಿದ್ದರು.