ರಕ್ತದಾನ ಸಾಮಾಜಿಕ ಸೇವೆಯ ಭಾಗ

21sgr2
ಸಾಗರದ ಎಂಡಿಎಫ್‌ನ ಡಾ. ಜಿ. ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ಬಿ.ಜಿ.ಸಂಗಮ್, ಬಿ.ಆರ್.ಜಯಂತ್, ಕೆ.ಎಂ.ಸೂರ್ಯನಾರಾಯಣ ಇತರರಿದ್ದರು.
Published on

ಸಾಗರ: ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನವು ಸಾಮಾಜಿಕ ಸೇವೆಯ ಒಂದು ಭಾಗ ಎಂದು ರೋಟರಿ ರಕ್ತನಿಧಿ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಬಿ.ಜಿ.ಸಂಗಮ್ ಹೇಳಿದರು.

ನಗರದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಡಾ. ಜಿ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ವಿದ್ಯಾರ್ಥಿ ಸಂಘ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಒಳಿತಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲೇ ರಕ್ತದಾನದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ನಮ್ಮ ಸಂಸ್ಥೆ ಕೆಲಸ ಮಾಡುತ್ತಿದೆ. ಸಂಸ್ಥೆಯ ಸದುದ್ದೇಶದ ಜತೆ ಎಲ್ಲರೂ ಕೈಜೋಡಿಸಬೇಕು ಎಂದರು.

ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಂಸ್ಥೆ ಉಪಾಧ್ಯಕ್ಷ ಕೆ.ಎಂ.ಸೂರ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಡಾ. ಎಚ್.ಎಂ.ಶಿವಕುಮಾರ್, ಪ್ರಮುಖರಾದ ಪ್ರಕಾಶ್, ಡಾ. ವಿ.ಎನ್.ಶಿಲ್ಪಾ, ಅಂಕಿತಾ, ಶರಣಬಸವ ನಾಯ್ಕ, ಭಾಗ್ಯಶ್ರೀ, ರಮೇಶ್ ಎನ್.ನಾಯ್ಕ, ಪ್ರತೀಕ್ಷಾ, ಸಿಂಧು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net